ಟಿ. ಜಿ. ಶ್ರೀನಿಧಿ
ಪ್ರಪಂಚದಲ್ಲಿ ಕ್ರೆಡಿಟ್ ಕಾರ್ಡ್ - ಡೆಬಿಟ್ ಕಾರ್ಡ್ ನೀಡುವ ಸಾವಿರಾರು ಬ್ಯಾಂಕುಗಳಿವೆ, ಲಕ್ಷಗಟ್ಟಲೆ ವ್ಯಾಪಾರಸ್ಥರಿದ್ದಾರೆ, ಕೋಟ್ಯಂತರ ಸಂಖ್ಯೆಯ ಗ್ರಾಹಕರಿದ್ದಾರೆ. ಕಾರ್ಡ್ ನೀಡುವ ಪ್ರತಿ ಬ್ಯಾಂಕಿನ ಸಂಪರ್ಕ ಪ್ರತಿಯೊಬ್ಬ ವ್ಯಾಪಾರಸ್ಥನಿಗೂ ಇರಬೇಕು ಎಂದರೆ ಅದು ಅಸಾಧ್ಯವೇ ಸರಿ. ಇಂತಹ ಪರಿಸ್ಥಿತಿಯಲ್ಲಿ ಗ್ರಾಹಕ, ವ್ಯಾಪಾರಸ್ಥ ಹಾಗೂ ಬ್ಯಾಂಕುಗಳ ನಡುವಿನ ಸಂಪರ್ಕ ಸೇತುವಿನಂತೆ ವೀಸಾ ಹಾಗೂ ಮಾಸ್ಟರ್ಕಾರ್ಡ್ನಂತಹ ಸಂಸ್ಥೆಗಳು ಕೆಲಸಮಾಡುತ್ತವೆ.
ಯಾವುದೇ ವ್ಯಾಪಾರಸ್ಥನೊಡನೆ ವ್ಯವಹರಿಸುವಾಗ ಗ್ರಾಹಕ ತನ್ನ ಕಾರ್ಡ್ ಬಳಸುತ್ತಾನೆ ಎಂದುಕೊಳ್ಳೋಣ. ಆತನ ಬ್ಯಾಂಕ್ ಖಾತೆ ಪರಿಶೀಲಿಸಿ ಅದರಲ್ಲಿ ಸಾಕಷ್ಟು ಹಣವಿದ್ದರೆ ಅದನ್ನು ಆತನ ಬ್ಯಾಂಕಿನಿಂದ ವ್ಯಾಪಾರಸ್ಥನ ಬ್ಯಾಂಕಿಗೆ-ಖಾತೆಗೆ ವರ್ಗಾಯಿಸಲು ನೆರವಾಗುವುದು ಈ ಸಂಸ್ಥೆಗಳ ಕೆಲಸ. ಇದಕ್ಕಾಗಿ ಅವು ಬ್ಯಾಂಕುಗಳಿಂದ ಶುಲ್ಕ ವಸೂಲಿ ಮಾಡುತ್ತವೆ.