ಬುಧವಾರ, ಜನವರಿ 11, 2017

ಫಾಸ್ಟ್ ಚಾರ್ಜಿಂಗ್ ಎಂದರೇನು?

ಟಿ. ಜಿ. ಶ್ರೀನಿಧಿ

ಈಚಿನ ದಿನಗಳಲ್ಲಿ ಮೊಬೈಲ್ ಫೋನುಗಳೇನೋ ಸ್ಮಾರ್ಟ್ ಆಗುತ್ತಿವೆ, ಸರಿ. ಆದರೆ ಅವುಗಳ ಬ್ಯಾಟರಿಯಲ್ಲಿ ಮಾತ್ರ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ; ಪದೇಪದೇ ಚಾರ್ಜ್ ಮಾಡಬೇಕಾದ ಪರಿಸ್ಥಿತಿಯಿಂದ - ಪ್ರತಿಬಾರಿ ಚಾರ್ಜ್ ಮಾಡಲು ಗಂಟೆಗಟ್ಟಲೆ ಕಾಯಬೇಕಾದ ಫಜೀತಿಯಿಂದ ಇನ್ನೂ ಬಿಡುಗಡೆ ಸಿಕ್ಕಿಲ್ಲ.

ಫೋನ್ ಚಾರ್ಜ್ ಆಗಲು ಹೀಗೆ ಗಂಟೆಗಟ್ಟಲೆ ಕಾಯುವ ಬದಲಿಗೆ ಕೆಲವೇ ಸೆಕೆಂಡುಗಳಲ್ಲಿ ಪೂರ್ತಿ ಚಾರ್ಜ್ ಆಗುವ ಬ್ಯಾಟರಿ ಸಿಕ್ಕರೆ ಹೇಗೆ? ಈ ಪ್ರಶ್ನೆಗೆ ಉತ್ತರ ಹುಡುಕಲು ಹಲವು ಪ್ರಯತ್ನಗಳು ನಡೆದಿವೆ.

ಈಚೆಗೆ ಜನಪ್ರಿಯತೆ ಗಳಿಸಿಕೊಳ್ಳುತ್ತಿರುವ 'ಫಾಸ್ಟ್ ಚಾರ್ಜಿಂಗ್' ತಂತ್ರಜ್ಞಾನ ಇಂತಹ ಪ್ರಯತ್ನಗಳಲ್ಲೊಂದು.
ಸಾಮಾನ್ಯ ಚಾರ್ಜರುಗಳಿಗಿಂತ ಹೆಚ್ಚಿನ ಪ್ರಮಾಣದ ವಿದ್ಯುತ್ ಪೂರೈಸುವ ಮೂಲಕ ಬ್ಯಾಟರಿ ಬೇಗ ಚಾರ್ಜ್ ಆಗುವಂತೆ ಮಾಡುವುದು ಈ ತಂತ್ರಜ್ಞಾನದ ಉದ್ದೇಶ. ಸಾಮಾನ್ಯ ಚಾರ್ಜರುಗಳಿಗೆ ಹೋಲಿಸಿದಾಗ ಈ ತಂತ್ರಜ್ಞಾನ ಬಳಸುವ ಚಾರ್ಜರುಗಳು ಬ್ಯಾಟರಿ ಚಾರ್ಜ್ ಮಾಡಲು ಸರಿಸುಮಾರು ಅರ್ಧದಷ್ಟು ಸಮಯವನ್ನಷ್ಟೆ ತೆಗೆದುಕೊಳ್ಳುತ್ತವೆ.

ಕೆಲ ಮೊಬೈಲ್ ತಯಾರಕರು ತಮ್ಮ ಸಂಸ್ಥೆಯ ಮೊಬೈಲುಗಳ ಜೊತೆಗೇ ಫಾಸ್ಟ್ ಚಾರ್ಜರುಗಳನ್ನು ನೀಡುತ್ತಿರುವುದು ಸಂತೋಷದ ವಿಷಯ. ಇನ್ನು ಕೆಲ ಮೊಬೈಲುಗಳ ಜೊತೆಗೆ ಫಾಸ್ಟ್ ಚಾರ್ಜರ್ ಬಾರದಿದ್ದರೂ ಮಾರುಕಟ್ಟೆಯಲ್ಲಿ ದೊರಕುವ ಬೇರೆ ಫಾಸ್ಟ್ ಚಾರ್ಜರ್ ಬಳಸಿ ಅವನ್ನೂ ಬೇಗನೆ ಚಾರ್ಜ್ ಮಾಡಿಕೊಳ್ಳಬಹುದು.

ಜುಲೈ ೨೮, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ

2 ಕಾಮೆಂಟ್‌ಗಳು:

Chinnamma baradhi ಹೇಳಿದರು...

'ಫಾಸ್ಟ್ ಚಾರ್ಜಿಂಗ್' ತಂತ್ರಜ್ಞಾನದ ಸಲುವಾಗಿ ಹೆಚ್ಚಿನ ಪ್ರಮಾಣದ ವಿದ್ಯುತ್ನಿ೦ದ ನಮ್ಮ ಜ೦ಗಮವಾಣಿಯ ತಾಳಿಕೆ ಹಾಗು ಬಾಳಿಕೆಯಲ್ಲಿ ತೊ೦ದರೆಗಳಾಗುತ್ತವೆಯೇ ಎ೦ಬ ಗುಮಾನಿ.

Srinidhi ಹೇಳಿದರು...

ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ ಫೋನುಗಳಲ್ಲಿ ಅದಕ್ಕೆ ಸೂಕ್ತವಾದ ಬ್ಯಾಟರಿಯೇ ಇರುತ್ತದೆ. ಈ ಕುರಿತ ಕೆಲ ಕುತೂಹಲಕರ ಚರ್ಚೆಗಳು ಬೇರೆಬೇರೆ ಜಾಲತಾಣಗಳಲ್ಲಿ (ಕೋರಾ ಇತ್ಯಾದಿ) ನಡೆದಿವೆ; ಒಮ್ಮೆ ಗೂಗಲ್ ಮಾಡಿ ನೋಡಿ.

badge