ಡಿಸೆಂಬರ್ ೨೧, ೨೦೧೩ರಂದು ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ೨೦೧೩ರ 'ಕನ್ನಡ ಮತ್ತು ಅವಕಾಶ' ಗೋಷ್ಠಿಯಲ್ಲಿ ಡಾ. ಯು. ಬಿ. ಪವನಜ ಮಾಡಿದ ಭಾಷಣದ ಪೂರ್ಣಪಾಠ.
ಡಾ| ಯು. ಬಿ. ಪವನಜ
ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಎಂಬುದು ಆರಂಭದ ದಿನಗಳಲ್ಲಿ ಗಣಕಗಳಲ್ಲಿ ಕನ್ನಡದ ಬಳಕೆಯಿಂದ ಪ್ರಾರಂಭವಾಯಿತು. ಇದು ಸುಮಾರು ಮೂರು ದಶಕಗಳ ಹಿಂದಿನ ಕಥೆ. ಪದಸಂಸ್ಕರಣವು ಇದರಲ್ಲಿಯ ಮೊದಲನೆಯದು. ಪತ್ರ, ಲೇಖನ, ದಾಖಲೆಗಳನ್ನು ಬರೆಯಲು, ತಿದ್ದಲು ಇವುಗಳ ಬಳಕೆ ಆಗುತ್ತಿದೆ. ಪದಸಂಸ್ಕರಣದ ಮುಂದುವರೆದ ಸೌಕರ್ಯವೇ ಡಿ.ಟಿ.ಪಿ. ಅಂದರೆ ಪಠ್ಯದ ಜೊತೆ ಚಿತ್ರಗಳನ್ನು ಸೇರಿಸಿ ಪುಟವಿನ್ಯಾಸ ಮಾಡುವುದು. ಈಗ ಎಲ್ಲ ಪುಸ್ತಕಗಳು ಮತ್ತು ಪತ್ರಿಕೆಗಳು ಇದೇ ವಿಧಾನದಿಂದ ತಯಾರಾಗುತ್ತಿವೆ.
ಕೆ.ಪಿ. ರಾವ್ ಮತ್ತು ಅವರ ಸೇಡಿಯಾಪು ತಂತ್ರಾಂಶ ಕನ್ನಡ ಭಾಷೆ ಮಾತ್ರವಲ್ಲ, ಸಮಗ್ರ ಭಾರತೀಯ ಭಾಷೆಗಳನ್ನೇ ಗಣಕದಲ್ಲಿ ಅಳವಡಿಸುವ ವಿಷಯದಲ್ಲಿ ಎಲ್ಲರಿಂದ ಮೊದಲು ಆಲೋಚಿಸಿ ಕಾರ್ಯಗತರಾದವರು ನಮ್ಮ ಕನ್ನಡಿಗರೇ ಆದ ಶ್ರೀ ಕೆ. ಪಿ. ರಾವ್ ಅವರು. ೭೦ರ ದಶಕದಲ್ಲಿ ಅವರು ಮುಂಬಯಿಯ ಟಾಟಾ ಪ್ರೆಸ್ನಲ್ಲಿ ತಂತ್ರಜ್ಞರಾಗಿದ್ದಾಗ ಪ್ರಪ್ರಥಮ ಬಾರಿಗೆ ಫೋಟೋಟೈಪ್ಸೆಟ್ಟಿಂಗ್ ಯಂತ್ರದಲ್ಲಿ ಭಾರತೀಯ ಭಾಷೆಗಳನ್ನು ಅಳವಡಿಸುವ ಕೆಲಸವನ್ನು ಪ್ರಾರಂಭಿಸಿದರು. ಇವರು ಆ ಕಾಲಕ್ಕೆ ಲಭ್ಯವಿದ್ದ ಸೀಮಿತ ತಂತ್ರಜ್ಞಾನಗಳನ್ನೇ ಬಳಸಿ ಸುಂದರವಾದ ಕಂಪ್ಯೂಟರ್ ಫಾಂಟ್ಗಳನ್ನು (ಅಕ್ಷರಶೈಲಿಗಳು) ಕನ್ನಡ ಮತ್ತು ಇತರೆ ಭಾಷೆಗಳಿಗೆ ನಿರ್ಮಿಸಿದರು. ಅಂತಹ ಕನ್ನಡ ಲಿಪಿಯ ಫಾಂಟ್ನ್ನು ಸುಲಭವಾಗಿ ಕಂಪ್ಯೂಟರ್ನಲ್ಲಿ ಮೂಡಿಸಲು ಸರಳ ಹಾಗೂ ತರ್ಕಬದ್ಧವಾದ ಕೀಲಿಮಣೆ (ಕೀಬೋರ್ಡ್) ವಿನ್ಯಾಸವನ್ನು ರಚಿಸಿದ ಕೀರ್ತಿ ಶ್ರೀ ಕೆ.ಪಿ ರಾವ್ರವರಿಗೆ ಸಲ್ಲುತ್ತದೆ. ಭಾರತೀಯ ಭಾಷೆಗಳಿಗೆ ಮೊದಲ ಬಾರಿಗೆ ಧ್ವನ್ಯಾತ್ಮಕ ಕೀಲಿಮಣೆಯ ವಿನ್ಯಾಸ ಮಾಡಿದವರು ಇವರೇ.

+-+Copy.png)