ಅಂತರಜಾಲದ ಮೂಲಕ ರವಾನೆಯಾಗುವ ಇಮೇಲ್ ಸಂದೇಶಗಳಲ್ಲಿ ಶೇ.೯೭ಕ್ಕೂ ಹೆಚ್ಚು ಭಾಗ ರದ್ದಿ ಸಂದೇಶಗಳಾಗಿರುತ್ತವೆ (ಸ್ಪಾಮ್) ಎಂದು ಮೈಕ್ರೋಸಾಫ್ಟ್ ವರದಿ ತಿಳಿಸಿದೆ. ಬಯಸದ ಮಾಹಿತಿಯನ್ನು ಬಲವಂತವಾಗಿ ಹೊತ್ತು ತರುವ ಈ ಸಂದೇಶಗಳಲ್ಲಿ ಅತ್ಯಂತ ಹೆಚ್ಚಿನ ಭಾಗ ಕಾನೂನು ಬಾಹಿರವಾಗಿ ಔಷಧಮಾರಾಟ ಮಾಡುವವರ ಜಾಹೀರಾತುಗಳಾಗಿರುತ್ತವಂತೆ.
ವೈರಸ್, ವರ್ಮ್, ಸ್ಪೈವೇರ್ ಮುಂತಾದ ಕುತಂತ್ರಾಂಶಗಳನ್ನು (ಮಾಲ್ ವೇರ್) ಹರಡುವಲ್ಲೂ ಸ್ಪಾಮ್ ಸಂದೇಶಗಳ ಪಾತ್ರಬಹಳ ದೊಡ್ಡದು ಎಂದು ಈ ವರದಿ ತಿಳಿಸಿದೆ. ಪ್ರಪಂಚದಲ್ಲಿರುವ ಪ್ರತಿ ೧೦೦೦ ಗಣಕಗಳಲ್ಲಿ ಹೆಚ್ಚುಕಡಿಮೆ ೯ ಗಣಕಗಳನ್ನು ಇಂತಹ ಕುತಂತ್ರಾಂಶಗಳು ಬಾಧಿಸುತ್ತವಂತೆ.
ಗಣಕ ಜಗತ್ತನ್ನು ಕಾಡುವ ಬಹಳಷ್ಟು ತೊಂದರೆಗಳಿಗೆ ಮೂಲ ಕಾರಣವಾದ ಈ ಸ್ಪಾಮ್ ಕಾಟದಿಂದ ಪಾರಾಗಲು ಬಳಕೆದಾರರ ವಿವೇಚನೆಯೇ ಸೂಕ್ತ ಮಾರ್ಗ ಎಂದು ತಜ್ಞರು ಹೇಳುತ್ತಾರೆ. ತಮ್ಮ ಇಮೇಲ್ ವಿಳಾಸಗಳು, ಮೊಬೈಲ್ ದೂರವಾಣಿ ಸಂಖ್ಯೆಗಳು, ಇನ್ಸ್‌ಟೆಂಟ್ ಮೆಸೇಜಿಂಗ್ ಬಳಕೆದಾರ ಹೆಸರು ಮುಂತಾದ ಸಂಪರ್ಕ ವಿವರಗಳು ಅಪಾತ್ರರ ಕೈಗೆ ಸಿಲುಕದಂತೆ ನೋಡಿಕೊಳ್ಳುವುದು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಎಂದು ಅಭಿಪ್ರಾಯಪಡುವ ಅವರು ಸಂದೇಹಾಸ್ಪದ ಅಂತರಜಾಲ ತಾಣಗಳಲ್ಲಿ ಎಂದಿಗೂ ನಿಮ್ಮ ಇಮೇಲ್ ವಿಳಾಸವನ್ನು ದಾಖಲಿಸಬೇಡಿ, ಹಾಗೂ ಅಪರಿಚಿತರಿಂದ ಬರುವ ಸಂದೇಶಗಳನ್ನು ತೆರೆಯಲುಹೋಗಬೇಡಿ ಎನ್ನುತ್ತಾರೆ.
ಸ್ಪಾಮ್ ತೊಂದರೆ ಬಗ್ಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 'ವಿಜ್ಞಾನ ಲೋಕ' ಪತ್ರಿಕೆಯಲ್ಲಿ ಪ್ರಕಟವಾಗಿದ್ದ ನನ್ನ ಲೇಖನ ಇಲ್ಲಿದೆ.
ಬುಧವಾರ, ಏಪ್ರಿಲ್ 8, 2009
ಬುಧವಾರ, ಮಾರ್ಚ್ 18, 2009
ಹಾರಿತು ನೋಡಿ ಸೂಪರ್ ಮಾಡೆಲ್ ಸ್ಯಾಟೆಲೈಟು!

ಈವರೆಗೆ ತಯಾರಿಸಲಾಗಿರುವ ಕೃತಕ ಉಪಗ್ರಹಗಳಲ್ಲೆಲ್ಲ ಅತ್ಯಂತ ಆಕರ್ಷಕವಾದದ್ದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುರೋಪಿನ ಉಪಗ್ರಹ GOCE (Gravity field and steady-state Ocean Circulation Explorer) ಅಂತರಿಕ್ಷಕ್ಕೆ ಚಿಮ್ಮಿದೆ.
ಮುಂದಿನ ದಿನಗಳಲ್ಲಿ ಈ ಉಪಗ್ರಹ ಸಂಗ್ರಹಿಸಲಿರುವ ಮಾಹಿತಿ ಭೂಮಿಯ ಆಂತರಿಕ ರಚನೆ ಹಾಗೂ ಗುರುತ್ವಾಕರ್ಷಣೆಯ ಬಗೆಗಿನ ನಮ್ಮ ಜ್ಞಾನದ ಪರಿಧಿಯನ್ನು ವಿಸ್ತರಿಸಲಿದೆ ಎಂದು ಯುರೋಪಿಯನ್ ಸ್ಪೇಸ್ ಏಜೆನ್ಸಿ (ಇಎಸ್‌ಎ) ಹೇಳಿದೆ. ಇಎಸ್‌ಎಯ ಅರ್ಥ್ ಎಕ್ಸ್‌ಪ್ಲೋರರ್ ಕಾರ್ಯಕ್ರಮದಡಿಯಲ್ಲಿ ಉಡಾಯಿಸಲಾಗುವ ಏಳು ಉಪಗ್ರಹಗಳ ಪೈಕಿ GOCE ಮೊದಲನೆಯದು.
ಮಂಗಳವಾರ, ಮಾರ್ಚ್ 10, 2009
ಇಂಟರ್‌ನೆಟ್ - 'ಅಂತರ್ಜಾಲ' ಸರಿಯೋ 'ಅಂತರಜಾಲ' ಸರಿಯೋ?
ಪ್ರೊ. ಜಿ. ವೆಂಕಟಸುಬ್ಬಯ್ಯನವರ ನಿಘಂಟಿನಿಂದ ಹೆಕ್ಕಿದ ಈ ಶಬ್ದಾರ್ಥಗಳನ್ನು ನೋಡಿ:
inter-city (ಗು) ಅಂತರ ನಗರ
inter collegiate (ಗು) ಅಂತರ ಕಾಲೇಜು, ಅನೇಕ ಕಾಲೇಜುಗಳ ನಡುವಣ
interprovincial (ಗು) ಅಂತರ ಪ್ರಾಂತೀಯ
interstate (ಗು) ಅಂತರ ರಾಜ್ಯದ, ರಾಜ್ಯಗಳ ನಡುವೆ ನಡೆಯುವ
ಇಂಟರ್ ಅಂದರೆ 'ಅಂತರ', "ಹೊರಗಿನದ್ದು" ಅಂದರೂ ಅನ್ನಬಹುದು ಅಲ್ವಾ?
ಸರಿ ಹಾಗಿದ್ರೆ, ಈಗ ಇಂಟ್ರಾ ಅಥವಾ 'ಅಂತರ್' ಅಂದರೆ ಏನು ನೋಡೋಣ ಬನ್ನಿ:
intra (ಸಪೂಪ) ಒಳಗೆ, ಒಳಗಡೆ, ಅಂತಃ, ಒಳಭಾಗದಲ್ಲಿ ಎಂಬರ್ಥ ಕೊಡುವ ಪದ
ಅಂತರ್ (ಸಂ) (ಅ) ಒಳಗಿನ
ಇದನ್ನೆಲ್ಲಾ ಯಾಕೆ ಹೇಳ್ತಿದೀನಿ ಅಂದ್ರೆ...
ನಾವು ಇಂಟರ್‌ನೆಟ್ ಅನ್ನು ಅಂತರ್ಜಾಲ ಎಂದೇ ಬರೆಯುತ್ತಿದ್ದೇವೆ.
ಅಂತರ್ಜಾಲ (ಅಂತರ್-ಜಾಲ) ಎಂದರೆ ಇಂಟ್ರಾ-ನೆಟ್: ಒಂದು ಸಂಸ್ಥೆ ಅಥವಾ ವ್ಯಕ್ತಿಯ ಒಡೆತನಕ್ಕೆ ಒಳಪಟ್ಟಿರುವ ಖಾಸಗಿ ಜಾಲ, ನಿರ್ದಿಷ್ಟ ಹಾಗೂ ಸೀಮಿತ ವ್ಯಾಪ್ತಿಯ 'ಒಳಗೆ' ಮಾತ್ರ ಅಸ್ತಿತ್ವದಲ್ಲಿರುವುದು. ವಿಕಿಪೀಡಿಯಾ ಪ್ರಕಾರ ಹೇಳುವುದಾದರೆ 'An intranet is a private computer network that uses Internet technologies to securely share any part of an organization's information or operational systems with its employees.'
ಆದರೆ ಇಂಟರ್‌ನೆಟ್ ಖಾಸಗಿ ಸ್ವತ್ತಲ್ಲವಲ್ಲ! ಗಣಕ-ಗಣಕಗಳ, ಜಾಲ-ಜಾಲಗಳ, ದೇಶ-ದೇಶಗಳ ನಡುವೆ ಸಂಪರ್ಕ ಕಲ್ಪಿಸುವ ಮಹಾಜಾಲ ಅದು.
ಹೀಗಾಗಿ ಇಂಟರ್‌ನೆಟ್‌ಗೆ 'ಅಂತರಜಾಲ' ಸರಿಯಾದ ಸಮಾನಾರ್ಥಕ, ಅಲ್ಲವೆ?
ನೀವೇನಂತೀರಿ? ಕಮೆಂಟಿಸಿ!!

ಸೋಮವಾರ, ಫೆಬ್ರವರಿ 16, 2009
ಇನ್ನೂ ಒಂದು ಆಕ್ಸಿಡೆಂಟು!! ಹೀಗೂ ಉಂಟೆ!!!

ಟಿ ಜಿ ಶ್ರೀನಿಧಿ
ಅಟ್ಲಾಂಟಿಕ್ ಸಾಗರದಲ್ಲಿ ಈ ಅಪಘಾತ ಸಂಭವಿಸಿದ್ದು ಫ್ರಾನ್ಸ್ ಹಾಗೂ ಬ್ರಿಟನ್ನಿನ ಸಬ್‌ಮರೀನ್‌ಗಳು ಇದರಲ್ಲಿ ಭಾಗಿಯಾಗಿವೆ. ಎರಡೂ ಸಬ್‌ಮರೀನ್‌ಗಳು ಪರಮಾಣುಶಕ್ತಿ ಚಾಲಿತವಾದ್ದರಿಂದ ಈ ಅಪಘಾತ ಹಿಂದೆಂದಿಗಿಂತ ಹೆಚ್ಚಿನ ಪ್ರಾಮುಖ್ಯ ಪಡೆದುಕೊಂಡಿದೆ. ಎರಡೂ ಸಬ್‌ಮರೀನ್‌ಗಳಿಗೆ ಸಾಕಷ್ಟು ಘಾಸಿಮಾಡಿರುವ ಈ ಅಪಘಾತ ತೀವ್ರಪ್ರಮಾಣದ್ದೇ ಆದರೂ ಕೂಡ ಪರಮಾಣು ವಿಕಿರಣ ಹೊರಸೂಸುವಂತಹ ಯಾವುದೇ ತೊಂದರೆ ಸಂಭವಿಸಿಲ್ಲ ಎಂದು ಬ್ರಿಟನ್ ಸೇನಾಮೂಲಗಳು ತಿಳಿಸಿವೆ. ಇದಲ್ಲದೆ ಇವೆರಡೂ ಸಬ್‌ಮರೀನ್‌ಗಳಲ್ಲಿದ್ದ ಕ್ಷಿಪಣಿಗಳು ಹಾಗೂ ಇತರ ಶಸ್ತ್ರಾಸ್ತ್ರಗಳು ಕೂಡ ಕ್ಷೇಮವಾಗಿರುವ ಸುದ್ದಿ ಹೊರಬಂದಿದ್ದು ಅಂತಾರಾಷ್ಟ್ರೀಯ ಸಮುದಾಯ ನಿಟ್ಟುಸಿರಿಡುವಂತೆ ಮಾಡಿದೆ.
ಆಕಾಶದಲ್ಲಿ ಎರಡು ಉಪಗ್ರಹಗಳು ಒಂದಕ್ಕೊಂದು ಡಿಕ್ಕಿಯಾದ ಘಟನೆ ಯ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು ಅಷ್ಟು ವಿಸ್ತಾರವಾದ ಸಾಗರದಲ್ಲಿ ಎರಡು ಸಬ್‌ಮರೀನ್‌ಗಳು ಅದುಹೇಗೆ ಡಿಕ್ಕಿಯಾದವು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿವೆ.
ಸಬ್‌ಮರೀನ್‌ಗಳು ತಮ್ಮ ಸುತ್ತಮುತ್ತ ಇರುವ ಇತರ ನೌಕೆ ಹಾಗೂ ಸಬ್‌ಮರೀನ್‌ಗಳನ್ನು ಗುರುತಿಸಲು ಅನುವುಮಾಡಿಕೊಡುವ ಸೋನಾರ್ ಉಪಕರಣ ಹೊಂದಿರುತ್ತವೆ. ಇದೇರೀತಿ ತಮ್ಮ ರಕ್ಷಣೆಗಾಗಿ ಇತರ ಸಬ್‌ಮರೀನ್‌ಗಳ ಸೋನಾರ್ ಕಣ್ಣಿಗೆ ಬೀಳದಿರಲು ಸೋನಾರ್ ವಿರೋಧಿ ಉಪಕರಣಗಳನ್ನೂ ಅಳವಡಿಸಿಕೊಂಡಿರುತ್ತವೆ. ಈ ಉಪಕರಣಗಳು "ಬಹಳ ಹೆಚ್ಚಿನ" ಕಾರ್ಯಕ್ಷಮತೆ ತೋರಿಸಿದ್ದು ಈ ಅಪಘಾತಕ್ಕೆ ಕಾರಣವಿರಬಹುದು ಎನ್ನಲಾಗಿದೆ.
ಗುರುವಾರ, ಫೆಬ್ರವರಿ 12, 2009
ಆಕ್ಸಿಡೆಂಟ್ ಆಗ್ಹೋಗಿದೆ!
ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳಿಗೂ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.
ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು ೭೮೦ ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.
ಈಗಾಗಲೇ ನಿಷ್ಕ್ರಿಯವಾಗಿತ್ತು ಎನ್ನಲಾಗಿರುವ ಹೆಚ್ಚೂಕಡಿಮೆ ಸಾವಿರ ಕೆಜಿ ತೂಕದ ರಷ್ಯಾದ ಉಪಗ್ರಹ ೧೯೯೩ರಲ್ಲಿ ಉಡಾವಣೆಯಾಗಿತ್ತಂತೆ. ಅಪಘಾತದಲ್ಲಿ ಭಾಗಿಯಾಗಿರುವ ೫೬೦ಕಿಲೋ ತೂಕದ ಇನ್ನೊಂದು ಉಪಗ್ರಹ ಅಮೆರಿಕಾದ ಇರಿಡಿಯಂ ಸಂಸ್ಥೆಗೆ ಸೇರಿದ್ದು ೧೯೯೭ರಲ್ಲಿ ಉಡಾವಣೆಯಾಗಿತ್ತು. ಇದು ಇರಿಡಿಯಂ ಸಂಸ್ಥೆ ಒದಗಿಸುವ ಉಪಗ್ರಹ ದೂರವಾಣಿ ಸೇವೆಗಾಗಿ ಬಳಕೆಯಾಗುತ್ತಿದ್ದ ಅನೇಕ ಉಪಗ್ರಹಗಳಲ್ಲಿ ಒಂದು.
ಈ ಉಪಗ್ರಹಗಳು ಅಪಾರ ವೇಗದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿರುವುದರಿಂದ ಅವೆರಡೂ ನುಚ್ಚುನೂರಾಗಿದ್ದು ಧೂಳು ಹಾಗೂ ಚೂರುಗಳ ದೊಡ್ಡದೊಂದು ಮೋಡವೇ ಸೃಷ್ಟಿಯಾಗಿದೆ. ಈ ಚೂರುಗಳು ಭೂಮಿಯ ವಾತಾವರಣ ಪ್ರವೇಶಿಸಿ ಉರಿದು ಬೂದಿಯಾದರೆ ಪರವಾಗಿಲ್ಲ, ಹಾಗಾಗದೆ ಅವೇನಾದರೂ ಅಂತರಿಕ್ಷದಲ್ಲೇ ಉಳಿದುಕೊಂಡರೆ ಇತರ ಉಪಗ್ರಹಗಳು ಹಾಗೂ ಅಂತರಿಕ್ಷಯಾನಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
೧೯೫೭ರಿಂದ ಈಚೆಗೆ ಉಡಾವಣೆಯಾಗಿರುವ ಉಪಗ್ರಹಗಳ ಸಂಖ್ಯೆ ಸುಮಾರು ಆರು ಸಾವಿರ ತಲುಪಿರುವುದು ಬಾಹ್ಯಾಕಾಶದ ಟ್ರಾಫಿಕ್ಕನ್ನು ಹೆಚ್ಚಿಸಿದ್ದು ಮುಂದಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗಲಿವೆಯೇ ಎಂಬ ಸಂಶಯ ಹುಟ್ಟುಹಾಕಿದೆ.

ಈ ಲೇಖನ ದಟ್ಸ್‌ಕನ್ನಡದಲ್ಲೂ ಪ್ರಕಟವಾಗಿದೆ. ಓದಲು ಇಲ್ಲಿ ಕ್ಲಿಕ್ ಮಾಡಿ!
ಭಾನುವಾರ, ಜನವರಿ 4, 2009
ಮಂಗಳವಾರ, ನವೆಂಬರ್ 4, 2008
ಸ್ಪಾಮ್ - ಇಮೇಲ್ ಕಿರಿಕಿರಿಯ ಮೂರು ದಶಕ
ಶುಕ್ರವಾರ, ಸೆಪ್ಟೆಂಬರ್ 5, 2008
ಸಾಫ್ಟ್‌ವೇರ್ ಕಂಪೆನೀಲಿ ಏನು ಮಾಡ್ತಾರೆ…?
ವಿಜಯ್ ರಾಜ್ ಕನ್ನಂತ
ಈ ಪ್ರಶ್ನೆಯನ್ನು ಇಲ್ಲಿಯವರೆಗೆ ಕಡಿಮೆಯೆಂದರೂ ನೂರು ಜನರಾದರೂ ನನ್ನ ಬಳಿ ಕೇಳಿದ್ದಾರೆ. ಅದೆಂತದೋ ಪ್ರಾಜೆಕ್ಟ್ ಅಂತಾರಲ್ಲ, ಕೋಡ್ ಬರೆಯೋದು ಹಾಗಂದ್ರೇನು, ಪ್ರೋಗ್ರಾಮ್ ಅಂದ್ರೆ ಏನು… ಹೀಗೆ ಸಾಫ್ಟ್‌ವೇರ್ ಜಗತ್ತಿನ ಬಗ್ಗೆ ಕುತೂಹಲದಿಂದ ಪ್ರಶ್ನೆ ಕೇಳಿದವರು ಅನೇಕ ಮಂದಿ ಇದ್ದಾರೆ. ಅಸಲಿಗೆ ಹಗಲು-ರಾತ್ರಿ ಕೆಲಸ ಕೆಲಸ ಅಂತ ಸಾಫ್ಟ್‌ವೇರ್ ಮಂದಿ ಮಾಡುವ ಕೆಲಸ ಯಾವ ಸ್ವರೂಪದ್ದು ಅನ್ನುವ ಕುರಿತಾದ ಬಹುತೇಕರ ಪ್ರಶ್ನೆಗೆ ಸರಳವಾಗಿ ವಿವರಿಸಲು ಯಾಕೆ ಪ್ರಯತ್ನಿಸಬಾರದೆಂದು ಇದನ್ನು ಬರೆಯಲು ಹೊರಟಿದ್ದೇನೆ. ಮುಂದೆ ಓದಿ

ಶುಕ್ರವಾರ, ಆಗಸ್ಟ್ 22, 2008
ಅಣು ಒಪ್ಪಂದ ಪೂರಕವೋ? ಮಾರಕವೋ?
ಮಹೇಶ್ ಮಲ್ನಾಡ್
ಆಣು ಒಪ್ಪಂದ, ಅಣು ಬಂಧ ..ಎಲ್ಲಿ ನೋಡಿದರೂ ಅದರದ್ದೇ ಮಾತು. ದಿನನಿತ್ಯ ಪತ್ರಿಕೆಗಳ ಮುಖಪುಟದ ಸುದ್ದಿ. ಈ ದೇಶದ ಸರ್ಕಾರವೇ ಅಣುಒಪ್ಪಂದಕ್ಕೆ ಬಲಿಯಾಗಿ ಬಿಡುವುದೇನೋ ಎಂಬ ಆತಂಕವೂ ಎದುರಾಗಿತ್ತು. ಇಷ್ಟಾದ ಮೇಲೂ ಈ ದೇಶದ ' ನಾಗರೀಕ ಪ್ರಭುಗಳಾದ ನಮಗೆ' ಅಣುಬಂಧದ ಕುರಿತು ಏನೂ ಅರಿವಿಲ್ಲ ಎಂದರೆ ತಪ್ಪಿಲ್ಲ. . ಮುಂದೆ ಓದಿ...
ಚೈತ್ರರಶ್ಮಿ ಮಾಸಪತ್ರಿಕೆಯ ಜುಲೈ ಸಂಚಿಕೆಯಲ್ಲಿ ಪ್ರಕಟಿತ ಲೇಖನ

ಶುಕ್ರವಾರ, ಜುಲೈ 18, 2008
ಸೋಮವಾರ, ಜುಲೈ 7, 2008
ಬುಧವಾರ, ಜುಲೈ 2, 2008
ಶುಕ್ರವಾರ, ಜೂನ್ 27, 2008
ಶ್ರದ್ಧಾಂಜಲಿ
ಬುಧವಾರ, ಜೂನ್ 25, 2008
ಬೌದ್ಧಿಕ ಸಿರಿ ಹಕ್ಕು ರಕ್ಷಿಸುವ ಚಿಂತೆ ಏಕೆ?
ಕ್ಷಯ ರೋಗದಂತಹ ರೋಗಗಳಿಗೆ ಔಷಧ ಶೋಧದ ಪ್ರಯತ್ನಗಳ ವಿಷಯದಲ್ಲಿ 'ಮುಕ್ತ ಆಕರ' ಮಾರ್ಗದಲ್ಲಿ ಭಾರತ ಏಕೆ ನಡೆಯಬೇಕು ಎಂದು ಪ್ರಖ್ಯಾತ ಭಾರತೀಯ ತಳಿವಿಜ್ಞಾನಿ ಸಮೀರ್ ಬ್ರಹ್ಮಚಾರಿ ಇಲ್ಲಿ ವಿವರಿಸುತ್ತಾರೆ.
೩೮ ರಾಷ್ಟ್ರೀಯ ಪ್ರಯೋಗಶಾಲೆಗಳ ಸಮೂಹವಾದ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಪರಿಷತ್ತಿನ ಮಹಾನಿರ್ದೇಶಕರೂ, ಭಾರತದ ಪ್ರಮುಖ ತಳಿವಿಜ್ಞಾನಿಗಳಲ್ಲಿ ಒಬ್ಬರೂ ಆದ ಸಮೀರ್ ಬ್ರಹ್ಮಚಾರಿ ಔಷಧ ಶೋಧಕ್ಕಾಗಿ 'ಮುಕ್ತ ಆಕರ' ಮಾರ್ಗವನ್ನು ತೆರೆದಿಡಲು ಬಯಸಿದ್ದಾರೆ. ಕ್ಷಯ ರೋಗ ಇವರ ಮೊದಲ ಗುರಿ. ವಿಶ್ವದ ಎಲ್ಲೆಡೆಯೂ ಔಷಧ ವಿನ್ಯಾಸ ಹಾಗೂ ಶೋಧದ (ಅದರಲ್ಲೂ ವಿಶ್ವದ ಬಡ ರಾಷ್ಟ್ರಗಳನ್ನು ಕಾಡುವ ಕ್ಷಯದಂತಹ ಸೋಂಕುರೋಗಗಳ) ವಿವಿಧ ಮಗ್ಗುಲುಗಳ ಸಂಶೋಧನೆಯಲ್ಲಿ ನಿರತರಾಗಿರುವ ವಿಜ್ಞಾನಿಗಳು ತಮ್ಮ ಶೋಧವಿವರಗಳನ್ನು ಮುಕ್ತನಿಧಿಯಲ್ಲಿ ದಾಖಲಿಸಬೇಕು. ಎಲ್ಲರೂ ಇದನ್ನು ವಿಮರ್ಶಿಸಿ, ಬಳಸಲಾಗುವಂತಹ ವ್ಯವಸ್ಥೆ ಇವರ ಪ್ರಸ್ತಾವ.
ಕ್ಷಯ ರೋಗವನ್ನುಂಟು ಮಾಡುವ ಮೈಕೊಬ್ಯಾಕ್ಟೀರಿಯಂ ಟ್ಯುಬರ್‌ಕುಲೆಯ ಜೀನೋಮ್ ಅನಾವರಣಗೊಂಡ ದಶಕವಾಗಿದೆ. ಆದರೂ ಅದರಿಂದ ಹೊಸ ಔಷಧ ದೊರಕುವ ಸುಳಿವಿಲ್ಲ. ವಿಶ್ವವು ಈ ಸಾಧನೆಯನ್ನು ಕೊಂಡಾಡುತ್ತಿರುವ ಸಂದರ್ಭದಲ್ಲಿ, ಔಷಧ ಶೋಧಕ್ಕಾಗಿ ಮುಕ್ತ ಆಕರಗಳ ಅವಶ್ಯಕತೆ, ಅದರ ಸಾಮರ್ಥ್ಯಗಳನ್ನು ಕುರಿತು ಡಾ. ಬ್ರಹ್ಮಚಾರಿಯವರೊಡನೆ ಟಿ.ವಿ. ಪದ್ಮ ನಡೆಸಿದ ಸಂಭಾಷಣೆಯ ತುಣುಕುಗಳು ಇಲ್ಲಿವೆ.
(ಅನುವಾದ: ಕೊಳ್ಳೇಗಾಲ ಶರ್ಮ. ಕೃಪೆ: http://www.scidev.net/)
- - - - -
ಮುಕ್ತ ಆಕರ ಔಷಧಿಗಳು ನಿಮ್ಮ ಮಹದಾಸೆ ಎಂದು ಒಮ್ಮೆ ನೀವು ಹೇಳಿದ್ದಿರಿ. ಅಭಿವೃದ್ಧಶೀಲ ರಾಷ್ಟ್ರಗಳಿಗೆ ಅದರ ಅವಶ್ಯಕತೆ ಇದೆ ಎಂಬ ಅನಿಸಿಕೆ ನಿಮಗೆ ಏಕೆ ಬಂತು?
ಮಾನವ ಜೀನೋಮ್‌ನ ಸರಣಿ ಅನಾವರಣಗೊಂಡಾಗ ಅದು ಆರೋಗ್ಯ ಸೇವೆಯಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ ಎಂದು ವಿಜ್ಞಾನಿಗಳು ವಿಶ್ವದ ಜನತೆಗೆ ನಂಬಿಕೆ ಹುಟ್ಟಿಸಿದ್ದರು. ಮೈಕೊಬ್ಯಾಕ್ಟೀರಿಯಂ ಟ್ಯುಬರ್‌ಕುಲೋಸಿಸ್‌ನ ಜೀನೋಮ್ ಅನಾವರಣಗೊಂಡು ಹತ್ತು ವರ್ಷಗಳೇ ಕಳೆದಿವೆ. ಆದರೆ ನಾವಿನ್ನೂ ಕ್ಷಯದ ಸಮಸ್ಯೆಯನ್ನು ಪರಿಹರಿಸಿಲ್ಲ. ಹೀಗಾಗಿ ಇದು (ಮುಕ್ತ ಆಕರ) ನನ್ನಂತಹ ಜೀನೋಮ್ ವಿಜ್ಞಾನಿಯ ಕರ್ತವ್ಯವೂ ಆಗಿದೆ. ಕ್ಷಯದ ಸಮಸ್ಯೆಯನ್ನೇ ನಾವು ಬಗೆಹರಿಸಿಲ್ಲದಾಗ, ಮಾನವನ ಇತರೆ ರೋಗಗಳ ಸಮಸ್ಯೆಯನ್ನು ನಾವು ಹೇಗೆ ಬಗೆಹರಿಸಬಲ್ಲೆವು?
ಸಾರ್ವಜನಿಕ ಧನಸಹಾಯ ದೊರೆಯುವ ಹಲವಾರು ಸಂಶೋಧನಾ ಸಂಸ್ಥೆಗಳು ಜೀವವೈದ್ಯಕೀಯದಲ್ಲಿ ಬಹಳಷ್ಟು ಸಂಶೋಧನೆ ನಡೆಸುತ್ತಿವೆ. ಆದರೆ ಔಷಧ-ಶೋಧದ ಅಂತಿಮ ಹಂತವನ್ನು ಔಷಧ ಕಂಪೆನಿಗಳ ಪಾಲಿಗೆ ಬಿಡಲಾಗಿದೆ. ಇದು ಹೆಚ್ಚಿಗೆ ಗುಪ್ತ ಶೋಧ. ಅಗ್ಗದ ಔಷಧಗಳು ಎಲ್ಲರ ಹಕ್ಕು ಎನ್ನುವುದಾದರೆ, ಎಲ್ಲ ಔಷಧಗಳನ್ನೂ ಎಲ್ಲರಿಗೂ ದೊರಕುವಂತೆ ಮಾಡಬಹುದು ಎನ್ನುವುದು ನನ್ನ ಆಶಯ. ಕ್ಷಯ ಅಥವಾ ಬಡವರನ್ನು ಕಾಡುವ ರೋಗಗಳ ವಿಷಯಕ್ಕೆ ಬಂದಾಗ, ಇವುಗಳಲ್ಲಿನ ಲಾಭದ ಅಂಶ ಕಡಿಮೆ ಇರುವುದರಿಂದ ಇವುಗಳ ಬಗ್ಗೆ ಕೆಲಸ ಮಾಡುವಂತೆ ಔಷಧ ಕಂಪೆನಿಗಳನ್ನು ಒಪ್ಪಿಸುವುದು ಕಷ್ಟ. ಆದ್ದರಿಂದ ಇಂತಹ ಕೆಲಸಗಳಲ್ಲಿ ಪಾಲ್ಗೊಳ್ಳುವುದು ಸಾರ್ವಜನಿಕ ಸಂಸ್ಥೆಗಳ ಜವಾಬ್ದಾರಿಯೂ ಹೌದು.ಇಂತಹ ಸೋಂಕು ರೋಗಗಳು ಹಾಗೂ ಬಡವರ ರೋಗಗಳ ವಿಷಯದಲ್ಲಿ ನಾವು ಬೌದ್ಧಿಕ ಸಿರಿ ಹಕ್ಕುಗಳ ಬಗ್ಗೆ ಚಿಂತಿಸಬೇಕೇಕೆ? ಇಂಟರ್‌ನೆಟ್ ಮತ್ತು ಮಾನವ ಜೀನೋಮ್‌ನ ಅಭಿವೃದ್ಧಿಯಲ್ಲಿ ಮಾಡಿದಂತೆ ಈ ರೋಗಗಳ ಔಷಧಗಳ ಶೋಧಕ್ಕೆ ನಮ್ಮ ಕಲ್ಪನೆಗಳು ಮತ್ತು ಬುದ್ಧಿಮತ್ತೆಯನ್ನು ಹಂಚಿಕೊಂಡು, ಒಂದು ಮುಕ್ತ ಆಕರ ರಂಗವನ್ನು ಒದಗಿಸಬಾರದೇಕೆ? ಮುಕ್ತ ಆಕರ ಔಷಧ ಸಂಶೋಧನೆಗೆ ಶೋಧವಿವರಗಳನ್ನು ಒದಗಿಸುವಷ್ಟು, ಭಾರತ ಮತ್ತು ಇತರೇ ಅಭಿವೃದ್ಧಶೀಲ ರಾಷ್ಟ್ರಗಳನ್ನು ಇಂಟರ್‌ನೆಟ್ ಮತ್ತು ಮಾನವ ಜೀನೋಮ್ ಯೋಜನೆಗಳು ಸಬಲಗೊಳಿಸಿವೆ.
ಮುಕ್ತ ಆಕರ ಸಂಶೋಧನೆಯಲ್ಲಿ ಎಲ್ಲ ಔಷಧಗಳಿಗೂ ಅನ್ವಯಿಸಬೇಕು ಎನ್ನುತ್ತೀರೋ ಅಥವಾ ಆಯ್ದ ಕೆಲವು ಔಷಧಗಳಿಗಷ್ಟೆಯೋ?
ಮಾರುಕಟ್ಟೆಯಲ್ಲಿ ದೊರೆಯುವ ಲಾಭಾಂಶದಿಂದಾಗಿ ಕೆಲವು ಔಷಧಗಳನ್ನು ಗುರಿಯಿಡಲಾಗಿದೆ. ಇವು ಶ್ರೀಮಂತರಿಗಷ್ಟೆ ಲಭ್ಯ. ಇಂತಹ ಔಷಧಗಳ ಶೋಧವನ್ನು ಪೇಟೆಂಟು ರಕ್ಷಿತ ಮಾರ್ಗ ಅನುಸರಿಸಿ ನಡೆಸಬಹುದು. ಆದರೆ, ಮಾರುಕಟ್ಟೆಯ ಬೆಂಬಲವಿಲ್ಲದ, ಬಡವರಿಗೆ ಅವಶ್ಯಕವಾದ ಔಷಧಗಳಿಗೆ ಮುಕ್ತ ಆಕರ ಮಾರ್ಗ ಲಾಭದಾಯಕವಾಗುತ್ತದೆ.ಮಾರ್ಗದ ಆಯ್ಕೆ ಉತ್ಪನ್ನ ಯಾವುದೆನ್ನುವುದನ್ನು ಅವಲಂಬಿಸಿದೆ. ಭತ್ತದ ಗದ್ದೆ ಹಾಗೂ ಅತಿ ಬೆಲೆಯ ಉತ್ಪನ್ನವನ್ನು ತಯಾರಿಸುವ ಕಾರ್ಖಾನೆ ಇದೆ ಎಂದುಕೊಳ್ಳಿ. ಕಾರ್ಖಾನೆಯ ಸುತ್ತಲೂ ಗೋಡೆ ಕಟ್ಟಿ, ಯಾರೂ ಒಳನುಗ್ಗದ ಹಾಗೆ ರಕ್ಷಿಸುವುದರಲ್ಲಿ ಅರ್ಥವಿದೆ. ಆದರೆ ಬಡವರಿಗೂ ಅವಶ್ಯಕವಾದ ಭತ್ತವನ್ನು ಬೆಳೆಯುವ ಗದ್ದೆಯ ಸುತ್ತ ಬಲವಾದ ಗೋಡೆ ಕಟ್ಟುತ್ತೇವೆಯೇ? ಹಾಗೆ ಮಾಡಿದರೆ, ಗೋಡೆ ಕಟ್ಟುವ ವೆಚ್ಚ ಹಾಗೂ ಅದರ ನಿರ್ವಹಣಾ ವೆಚ್ಚವೆಲ್ಲವೂ ಅಕ್ಕಿಯ ಬೆಲೆಯಲ್ಲಿ ಸೇರಿಕೊಳ್ಳುತ್ತದೆ. ಬಡವರು ಅದನ್ನು ಕೊಳ್ಳಶಕ್ತರಾಗುವರು. ಮುಕ್ತ ಆಕರ ಮಾರ್ಗವು ಎಲ್ಲರಿಗೂ ಬೇಕಾದ 'ಭತ್ತದ ಗದ್ದೆ'ಗಳಿಗೆ, ಲಕ್ಸುರಿ ಉತ್ಪನ್ನಗಳಿಗೆ ಅಲ್ಲ.
ಮುಕ್ತ ಆಕರವೆನ್ನುವುದು ಪೇಟೆಂಟು ಹಕ್ಕುಗಳು ಹಾಗೂ ಬೌದ್ಧಿಕ ಸಿರಿ ಹಕ್ಕುಗಳನ್ನು ಭದ್ರಗೊಳಿಸಬೇಕೆನ್ನುವ ಜಾಗತಿಕ ಪ್ರವಾಹಕ್ಕೆ ವಿರುದ್ಧ ಈಜಿದಂತಲ್ಲವೆ? ಭಾರತದ ಒಳಗೂ, ಹೊರಗೂ, ಪ್ರಬಲವಾಗಿರುವ ಔಷಧ ಕಂಪೆನಿಗಳ ವಿರೋಧವನ್ನು ಎದುರಿಸಿ ಅದು ಉಳಿಯಬಲ್ಲುದೇ?
ಹಾಗೇನಿಲ್ಲ. ಉದಾಹರಣೆಗೆ, ಕ್ಷಯ ರೋಗದ ವಿಷಯದಲ್ಲಿ ಹಲವಾರು ಔಷಧ ಕಂಪೆನಿಗಳು ಈ ಮಾರ್ಗವನ್ನು ಅನುಸರಿಸುವತ್ತ ಆಸಕ್ತಿ ತೋರಿ, ನನ್ನ ಪ್ರಯತ್ನಗಳಿಗೆ ಪ್ರತಿಕ್ರಯಿಸಿವೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಇಂತಹ ಔಷಧಗಳ ಅವಶ್ಯಕತೆ ಇರುವ ರೋಗಿಗಳ ಸಂಖ್ಯೆ ಬೃಹತ್ ಆಗಿರುವುದರಿಂದ, ಹೊಸದೊಂದು ಔಷಧದ ಶೋಧವನ್ನು ಕಾಣುವ ಇಚ್ಛೆ ಅವುಗಳಿಗೂ ಇದೆ. ಅಲ್ಲದೆ ಇಂದು ಖಾಸಗಿ ಕ್ಷೇತ್ರವೂ ಕೂಡ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಚಿಂತಿಸುತ್ತಿವೆ. ಹಲವು ಖಾಸಗಿ ಕಂಪೆನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಎಚ್ಚರಗೊಂಡಿವೆ. ಇನ್ನೂ ಹಲವು ಅವುಗಳ ಜೊತೆ ಸೇರಲಿವೆ. ಇದಲ್ಲದೆ ಸುಲಭ ಬೆಲೆಯ ಔಷಧಗಳಿಗೆ ಬೆಂಬಲ ನೀಡುವ ಬಿಲ್‌ಗೇಟ್ಸ್ ದತ್ತಿಯಂತಹ ಹಲವು ಖಾಸಗಿ ಧರ್ಮ ಸಂಸ್ಥೆಗಳೂ ಇವೆ.
ಮುಕ್ತ ಆಕರ ಶೋಧಗಳಿಂದಾಗಿ ಔಷಧ ಕಂಪೆನಿಗಳು ಔಷಧ ಸಂಶೋಧನೆಗೆ ತಾವು ಮಾಡುವ ವೆಚ್ಚವನ್ನು ಕಡಿತಗೊಳಿಸಬಹುದು ಎನ್ನುವ ಚಿಂತೆ ಬರಲಿಲ್ಲವೇ? ಅಲ್ಲದೆ ಸಾರ್ವಜನಿಕ ಧನ ಸಹಾಯ ಅವಶ್ಯಕವಾದಷ್ಟು ದೊರಕದಿದ್ದರೆ ಎನ್ನುವ ಚಿಂತೆ ಇಲ್ಲವೇ?
ಆ ಚಿಂತೆ ನನಗಿಲ್ಲ. ಖಾಸಗಿ ಕಂಪೆನಿಗಳು ಮುಂದೆ ಬಂದು ಅವಗಣನೆಗೆ ಒಳಗಾಗಿರುವ ರೋಗಗಳಿಗೆ ಔಷಧಗಳನ್ನು ಅಭಿವೃದ್ಧಿಪಡಿಸದಿದ್ದಲ್ಲಿ, ಆ ಬಗ್ಗೆ ಸಂಶೋಧನೆ ಮಾಡುವುದು ಸಾರ್ವಜನಿಕ ಸಂಸ್ಥೆಗಳ ಹೊಣೆ ಹಾಗೂ ಕರ್ತವ್ಯವಾಗುತ್ತದೆ. ಭಾರತ ಈಗ ಬಡರಾಷ್ಟ್ರವಾಗಿ ಉಳಿದಿಲ್ಲ. ಇಂತಹ ಸಂಶೋಧನೆಗಳ ವೆಚ್ಚವನ್ನು ಭಾರತ ಸರಕಾರ ಭರಿಸುವುದು ಸಾಧ್ಯ. ಕಳೆದ ಐವತ್ತು ವರ್ಷಗಳಲ್ಲಿ ವಿಜ್ಞಾನಿಗಳು ಕೈಗೆಟುಕಬಹುದಾದ ಬೆಲೆಯಲ್ಲಿ ಔಷಧ ತಯಾರಿಕೆಯ ತಂತ್ರಗಳನ್ನು ರೂಪಿಸಿದ್ದರಿಂದ ಭಾರತಕ್ಕೆ ಲಾಭವಾಗಿದೆ. ಉದಾಹರಣೆಗೆ, ಸಿಎಸ್‌ಐಆರ್‌ನ ಎರಡು ಪ್ರಯೋಗಾಲಯಗಳು ಒಟ್ಟಾಗಿ ಆರ್ಟಿಮಿಸಿನ್‌ನಿಂದ ಪಡೆದ ಮಲೇರಿಯಾ ಔಷಧ, ಈ-ಮಾಲ್ ಅನ್ನೇ ತೆಗೆದುಕೊಳ್ಳಿ. ಸಾರ್ವಜನಿಕ ಸಂಸ್ಥೆಗಳ ವಿಜ್ಞಾನಿಗಳಾದ ನಾವು ಇದನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡಿದ್ದೇವೆ. ಈವತ್ತು ಭಾರತದ ಮಾರುಕಟ್ಟೆ ಈ-ಮಾಲ್‌ನಿಂದ ತುಂಬಿ ತುಳುಕುತ್ತಿದೆ. ಇದಕ್ಕಾಗಿ ನಮಗೆ ಯಾವ ರಾಯಧನವೂ ಸಿಕ್ಕಿಲ್ಲ. ಅಂದರೆ, ಸಾರ್ವಜನಿಕ ಸಂಸ್ಥೆಗಳು ಈ ಕೆಲಸವನ್ನು ಮಾಡಬಹುದು ಅಲ್ಲವೇ?
ಹಾಗೇ ಸಿಎಸ್‌ಐಆರ್ ಆರಂಭಿಸಿದ ನ್ಯೂ ಮಿಲೆನಿಯಂ ಇಂಡಿಯನ್ ಟೆಕ್ನಾಲಜಿ ಲೀಡರ್‌ಶಿಪ್ ಇನಿಶಿಯೇಟಿವ್ ಯೋಜನೆಯನ್ನು ತೆಗೆದುಕೊಳ್ಳಿ. ತಂತ್ರಜ್ಞಾನದ ಬೆಳವಣಿಗೆಗಾಗಿ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳ ನಡುವಿನ ಸಹಕಾರವನ್ನು ಪ್ರೋತ್ಸಾಹಿಸಲು ೨೦೦೦ದ ಇಸವಿಯಲ್ಲಿ ಇದನ್ನು ಹಮ್ಮಿಕೊಳ್ಳಲಾಯಿತು. ಕ್ಷಯರೋಗ, ಪ್ಸೋರಿಯಾಸಿಸ್, ಡಯಾಬಿಟೀಸ್ (ಮಧುಮೇಹ) ಮತ್ತು ಆತ್ರೈಟಿಸ್ (ಕೀಲುವಾತ) ಇತ್ಯಾದಿಗಳ ವಿಷಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ವೆಚ್ಚವನ್ನು ಈ ಯೋಜನೆ ಕುಗ್ಗಿಸಿದೆ. ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳು ಖಂಡಿತವಾಗಿಯೂ ಒಟ್ಟಾಗಿ ಕೆಲಸ ಮಾಡಬಲ್ಲುವು.
ಈ ಬಗ್ಗೆ, ಸಿಎಸ್‌ಐಆರ್ ಹೊರತಾಗಿ, ಭಾರತದ ಇತರೇ ಉನ್ನತ ಸಂಶೋಧನಾ ಸಂಸ್ಥೆಗಳು ಹಾಗೂ ವಿದೇಶೀ ಸಂಸ್ಥೆಗಳ ಪ್ರತಿಕ್ರಿಯೆ ಏನು?
ಭಾರತದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕ್ಷಯ ರೋಗದ ಈ ಮುಕ್ತ ಆಕರ ಸಂಶೋಧನೆಯಲ್ಲಿ ಪಾಲ್ಗೊಳ್ಳುವ ಆಸಕ್ತಿಯನ್ನು ಸೂಚಿಸಿ ವಿವಿಧ ಸಂಶೋಧನಾ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಔಷಧ ಕಂಪೆನಿಗಳಿಂದ ನನಗೆ ಎಷ್ಟೊಂದು ಪತ್ರಗಳು ಬಂದಿವೆ. ಎಂದರೆ ಎಲ್ಲರನ್ನೂ ಕೂಡಿಸಿಕೊಳ್ಳುವುದು ಕಷ್ಟವಾಗಿದೆ. ಅಸ್ಟ್ರಾಜೆನೆಕಾದಂತಹ ಬೃಹತ್ ಕಂಪೆನಿಗಳು, ಬರ್ಕಲಿ ವಿಶ್ವವಿದ್ಯಾಲಯದಂತಹ ಸಂಸ್ಥೆಗಳು ಸಹಕಾರ ನೀಡುವುದಕ್ಕೆ ಆಸಕ್ತಿ ತೋರಿಸಿವೆ. ಮೈಕ್ರೊಸಾಫ್ಟ್‌ನ ಹಾಟಮೇಲ್ ಜನಕ ಸಬೀರ್ ಭಾಟಿಯ ಈ ಕಾರ್ಯಕ್ರಮಕ್ಕೆ ಒಂದು ತಂತ್ರಾಂಶ ಅಭಿವೃದ್ಧಿ ಮಾಡಿಕೊಡುವುದಾಗಿ ಹೇಳಿ ಬೆಂಬಲ ನೀಡಿದ್ದಾರೆ.
ತಂತ್ರಜ್ಞಾನದ ಉಳಿದ ಕ್ಷೇತ್ರಗಳಿಗೆ ಈ ಮುಕ್ತ ಆಕರ ಸಂಶೋಧನೆಯನ್ನು ಎಷ್ಟರ ಮಟ್ಟಿಗೆ ಅಳವಡಿಸಬಹುದು?
ಈ ಮುಕ್ತ ಆಕರ ಸಂಶೋಧನೆಯಲ್ಲಿ ಉತ್ಕೃಷ್ಟ ಮೇಧಾವಿಗಳು ಪಾಲ್ಗೊಳ್ಳುತ್ತಾರೆನ್ನುವುದು ಬಹಳ ಮುಖ್ಯವಾದ ಆದರೆ ಬಹಳಷ್ಟು ಜನ ಗಮನಿಸದೇ ಇರುವ ಅಂಶ. ಜ್ಞಾನ ಮುಕ್ತವಾಗಿರುವೆಡೆ, ಪ್ರತಿಭೆ ಬೆಳಗುತ್ತದೆ. ಶಕ್ತಿ, ನೀರು ಮತ್ತು ಆಹಾರಗಳಿಗೆ ಸಂಬಂಧಿಸಿದ ತಂತ್ರಜ್ಞಾನ ಕ್ಷೇತ್ರಗಳಿಗೂ ಮುಕ್ತ ಆಕರ ನೀತಿಯಿಂದ ಲಾಭವಾಗಲಿದೆ ಎನ್ನುವುದು ನನ್ನ ಅನಿಸಿಕೆ. ಶಕ್ತಿ ಪೂರೈಕೆಯ ವಿಷಯದಲ್ಲಿ ಸೌರ ಶಕ್ತಿ, ಪವನ ಶಕ್ತಿ, ಜಲಶಕ್ತಿ ಹಾಗೂ ಇತರೆ ಕ್ಷೇತ್ರಗಳಲ್ಲಿ ಪರಿಹಾರಗಳನ್ನು ನಾವು ಹುಡುಕಬಹುದು. ಇತರೆ ಕ್ಷೇತ್ರಗಳಿಗೂ ಇಂತಹುದೆ ತತ್ವ ಅನ್ವಯಿಸುತ್ತದೆ. ವೈದ್ಯಕೀಯ ನವಶೋಧ (ಇನ್ನೊವೇಶನ್ಸ್)ಗಳಿಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಕಟ್ಟಳೆಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ನೀವು ಬೆಂಬಲಿಸುವಿರಾ? ಉದಾಹರಣೆಗೆ, ಅಭಿವೃದ್ಧಶೀಲ ರಾಷ್ಟ್ರಗಳ ಅವಶ್ಯಕತೆಗೆ ಹೆಚ್ಚಿನ ಒತ್ತು ನೀಡುವಂತೆ ಪೇಟೆಂಟು ನಿಯಮಗಳನ್ನು ಇನ್ನಷ್ಟು ಸಡಿಲಿಸಬಹುದೇ?
ಆರೋಗ್ಯ ಸೇವೆಗಳು ಸರ್ವರಿಗೂ ಕೈಗೆಟುಕುವಂತೆ ಇರಬೇಕು ಎನ್ನುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಸದಾ ಬೆಂಬಲಿಸಿದೆ. ಆದ್ದರಿಂದ ಬಡವರ ರೋಗಗಳಾದ ಸೋಂಕು ರೋಗಗಳ ವಿಷಯದಲ್ಲಿ ಬೌದ್ಧಿಕ ಸಿರಿಯ ರಕ್ಷಣೆಯೇ ಆದ್ಯತೆಯ ವಿಷಯವಾಗಬಾರದು. ಇದು ಒಂದು ಬಗೆಯ ಸಮರ. ಆರೋಗ್ಯದ ಹಕ್ಕುಗಳು ಹಾಗೂ ಕೈಗೆಟುಕುವ ಔಷಧಗಳಿಗಾಗಿ ಒಂದು ಯುದ್ಧ. ಅಗ್ಗದ ಔಷಧಿಗಳ ವಿಷಯ ಈಗ ಭಯೋತ್ಪಾದನೆಯಷ್ಟೆ ಬೃಹತ್ತಾದ ಜಾಗತಿಕ ಸಮಸ್ಯೆ.
ಭಾರತದ ಕುರಿತಂತೆ ಅಂತರರಾಷ್ಟ್ರೀಯ ಮಟ್ಟದ ಪೇಟೆಂಟು ನಿಯಮಗಳಲ್ಲಿ, ನಿಮಗೆ ಅತ್ಯಾವಶ್ಯವಾಗಿ ಆಗಲೇಬೇಕೆನ್ನಿಸಿದ ಒಂದು ಬದಲಾವಣೆ ಯಾವುದು?
ಸೋಂಕು ರೋಗಗಳ ವಿಷಯಕ್ಕೆ ಕುರಿತಂತೆ ಕಡ್ಡಾಯ ಲೈಸೆನ್ಸೀಕರಣ ನಿಯಮವನ್ನು, ಎಲ್ಲ ಔಷಧ ಪೇಟೆಂಟುಗಳ ಮೇಲೂ ಅನ್ವಯಿಸಬೇಕು. ತುರ್ತು ಸಂದರ್ಭದಲ್ಲಿ ಯಾವುದೇ ರಾಷ್ಟ್ರವೂ ತಮ್ಮ ಪೇಟೆಂಟು ಪಡೆದ ಔಷಧವನ್ನು ಅಗ್ಗದ ಬೆಲೆಯಲ್ಲಿ ತಯಾರಿಸುವಂತೆ ಔಷಧ ಕಂಪೆನಿಗಳು ಅನುಮತಿಸಬೇಕೆನ್ನುವ ನಿಯಮ ಇದು. ಹೀಗೆ ಮಾಡಿದರೆ ಅಗ್ಗದ ಬೆಲೆಯಲ್ಲಿ ಔಷಧವನ್ನು ತಯಾರಿಸಿ ಬಡವರಿಗೂ ಅದು ಕೈಗೆಟುಕುವಂತೆ ಮಾಡಬಹುದು.
ಜಾಗತಿಕ ಮಟ್ಟದಲ್ಲಿ ಇಂತಹ ಬದಲಾವಣೆಗಳನ್ನು ತರುವುದರಲ್ಲಿ ಭಾರತದ ಪಾತ್ರ ಏನು ಎನ್ನುತ್ತೀರಿ?
ಭಾರತ ಇದರ ನೇತೃತ್ವ ವಹಿಸಬೇಕು। ಸರ್ವರಿಗೂ ಆರೋಗ್ಯ ಸೇವೆ ದಕ್ಕುವಂತೆ ಮಾಡುವ ಹೊಣೆ ಹೊರಬೇಕು. ಇದರಿಂದ ಏಷ್ಯಾ ಮತ್ತು ಆಫ್ರಿಕಾದ ಬಡಜನತೆಯ ಜೊತೆಗೆ ಸುಮಾರು ಮುನ್ನೂರು ಕೋಟಿ ಜನರಿಗೆ ಅಗ್ಗದ ಔಷಧಿಯ ಲಾಭ ದೊರೆಯುತ್ತದೆ. ಆದ್ದರಿಂದ, ಈ ಹಿಂದೆ ಹಲವು ರಾಷ್ಟ್ರಗಳಿಗೆ ಅಗ್ಗದ ಬೆಲೆಯಲ್ಲಿ ಔಷಧಗಳನ್ನು ಒದಗಿಸಿದ ಅನುಭವ ಇರುವ ಭಾರತ ಇದರಲ್ಲಿ ತಾನೇ ಮುನ್ನುಗ್ಗಬೇಕು.
(ಡಾ. ಸಮೀರ್ ಬ್ರಹ್ಮಚಾರಿ ಭಾರತದ ಬೃಹತ್ ಸಂಶೋಧನಾ ಸಂಸ್ಥೆಯಾದ ಸಿಎಸ್‌ಐಆರ್‌ನ ಮಹಾನಿರ್ದೇಶಕ. ಭಾರತದಲ್ಲಿ ಪ್ರತಿ ವರ್ಷವೂ ಅತಿ ಹೆಚ್ಚಿನ ಪೇಟೆಂಟುಗಳನ್ನು ದಾಖಲಿಸುವ ಸರ್ಕಾರಿ ಸಂಶೋಧನಾ ಸಂಸ್ಥೆ ಎನ್ನುವ ಹೆಗ್ಗಳಿಕೆ ಸಿಎಸ್‌ಐಆರ್‌ಗೆ ಇದೆ. ಡಾ. ಬ್ರಹ್ಮಚಾರಿಯವರಿಗೆ ಕನ್ನಡದ ನಂಟೂ ಇದೆ. ಇವರು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ಮೂರು ದಶಕಗಳಿಗೂ ಮೀರಿ ಸಂಶೋಧನೆ ನಡೆಸಿದವರು. ಕನ್ನಡತಿಯನ್ನು ಒಲಿದು ಕೈ ಹಿಡಿದವರು. ವಿಜ್ಞಾನ ಅಭಿವೃದ್ಧಿಗೆ ಪೂರಕವಾಗಿರಬೇಕು ಎನ್ನುವ ಹಂಬಲದಿಂದ ಅಭಿವೃದ್ಧಿಗೆ ಅನುಕೂಲವಾಗುವ ವಿಜ್ಞಾನ ಹಾಗೂ ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಸಂಗ್ರಹಿಸುವ ಅಂತರರಾಷ್ಟ್ರೀಯ ಸಂಘಟನೆ ಸೈನ್ಸ್ ಡೆವಲೆಪ್‌ಮೆಂಟ್ ನೆಟ್‌ಗೆ ಕಳೆದ ವಾರ ಅವರು ನೀಡಿದ ಸಂದರ್ಶನದ ಅನುವಾದ ಇದು. ಮೂಲ ಇಲ್ಲಿದೆ )

ಶುಕ್ರವಾರ, ಜೂನ್ 6, 2008
ಬುಧವಾರ, ಜೂನ್ 4, 2008
ಮಂಗಳವಾರ, ಮೇ 27, 2008
ಬ್ಲಾಗಿಂಗ್ - ಪರ್ಯಾಯ ಪತ್ರಿಕೋದ್ಯಮ
ಡಾ. ಯು. ಬಿ. ಪವನಜ
ಇತ್ತೀಚೆಗಿನ ದಿನಗಳಲ್ಲಿ ತುಂಬ ಕೇಳಿಬರುತ್ತಿರುವ ಪದ ಬ್ಲಾಗ್. ಅದರ ಹಲವು ಪ್ರತ್ಯಯಗಳೇ ಬ್ಲಾಗಿಂಗ್, ಬ್ಲಾಗರ್, ಇತ್ಯಾದಿ. ಈ ಬ್ಲಾಗ್ ಎಂದರೆ ಏನು? ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್‌ನೆಟ್‌ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿ ಎಂದೂ ಕರೆಯಬಹುದು. ಬ್ಲಾಗ್‌ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗರ್ ಎಂದರೆ ಬ್ಲಾಗ್ ಬರೆಯುವ ವ್ಯಕ್ತಿ.
ಬ್ಲಾಗ್ ಎನ್ನುವುದು ವೆಬ್‌ಲಾಗ್ (weblog) ಎನ್ನುವ ಪದದಿಂದ ವ್ಯುತ್ಪತ್ತಿಯಾಗಿದೆ. ಇದನ್ನು ಮೊತ್ತಮೊದಲು ಜಾನ್ ಬಾರ್ಗರ್ ಎಂದವರು ೧೯೯೭ರಲ್ಲಿ ಬಳಸಿದರು. ಪೀಟರ್ ಮರ್‌ಹೋಲ್‌ಝ್ ಅವರು ೧೯೯೯ರಲ್ಲಿ ಇದನ್ನು ವಿ ಬ್ಲಾಗ್ (we blog) ಎಂಬುದಾಗಿ ವಿಭಜಿಸಿದರು. ಎಂದರೆ ನಾವು ಬ್ಲಾಗ್ ಮಾಡುತ್ತಿದ್ದೇವೆ ಎಂಬ ಅರ್ಥ. ತದನಂತರ ಬ್ಲಾಗ್ ಎನ್ನುವುದು ನಾಮಪದ ಮತ್ತು ಕ್ರಿಯಾಪದವಾಗಿ ಬಳಕೆಯಾಗತೊಡಗಿತು. ೨೦೦೧ರ ನಂತರ ಬ್ಲಾಗ್ ಜನಪ್ರಿಯವಾಗತೊಡಗಿತಾದರೂ ೨೦೦೩ರಲ್ಲಿ ಹಲವು ಉಚಿತ ಬ್ಲಾಗಿಂಗ್ ತಾಣಗಳು ಅವತರಿಸಿ ಬ್ಲಾಗಿಂಗ್ ಮನೆಮಾತಾಗುವಂತಾಯಿತು. ಇದಿಷ್ಟು ಬ್ಲಾಗಿಂಗ್‌ನ ಇತಿಹಾಸದ ಬಗ್ಗೆ ಚುಟುಕಾದ ಮಾಹಿತಿ.
ಬ್ಲಾಗ್ ಬಗ್ಗೆ ಈಗ ಇನ್ನಷ್ಟು ವಿವರಗಳನ್ನು ನೋಡೋಣ. ಅಂತರಜಾಲದಲ್ಲಿ ಕೋಟಿಗಟ್ಟಲೆ ತಾಣಗಳಿವೆ (ವೆಬ್‌ಸೈಟ್). ಈ ತಾಣಗಳಿಗೂ ಬ್ಲಾಗ್‌ಗಳಿಗೂ ಇರುವ ವ್ಯತ್ಯಾಸವೇನು? ನಿಜವಾಗಿ ನೋಡಿದರೆ ಬ್ಲಾಗ್ ಕೂಡ ಒಂದು ಅಂತರಜಾಲ ತಾಣವೇ. ಆದರೆ ಒಂದು ವಿಧದ ತಾಣಗಳನ್ನು ಮಾತ್ರ ಬ್ಲಾಗ್ ಎಂದು ಕರೆಯಲಾಗುತ್ತದೆ. ಬ್ಲಾಗ್‌ನ ಲಕ್ಷಣಗಳು -ನಿಯಮಿತವಾಗಿ ಹೊಸ ಬರೆವಣಿಗೆಗಳನ್ನು ಸೇರಿಸುತ್ತಿರಬೇಕು, ಅವುಗಳನ್ನು ಸೇರಿಸಿದ ದಿನಾಂಕ ಪ್ರಕಾರ ಅಳವಡಿಸಿರಬೇಕು, ಕೊನೆಯ ಬರೆವಣಿಗೆ ಮೊದಲು ಲಭ್ಯವಾಗಿರುವಂತಿರುತ್ತದೆ, ಇತ್ಯಾದಿ. ಬ್ಲಾಗ್‌ನಲ್ಲಿ ಸೇರಿಸಲ್ಪಡುವ ಲೇಖನಕ್ಕೆ ಪೋಸ್ಟ್ ಅಥವಾ ಪೋಸ್ಟಿಂಗ್ ಎನ್ನುತ್ತಾರೆ. ಈ ಪೋಸ್ಟಿಂಗ್‌ಗೆ ಒಂದು ಶೀರ್ಷಿಕೆ, ಸೇರಿಸಿದ ದಿನಾಂಕ, ಮುಖ್ಯ ಬರಹ ಅಥವಾ ಲೇಖನ, ವಿಷಯ, ಇತ್ಯಾದಿ ಲಕ್ಷಣಗಳಿರುತ್ತವೆ. ಈ ಪೋಸ್ಟಿಂಗ್‌ನ ಕೆಳಗೆ ಓದುಗರು ತಮ್ಮ ಟೀಕೆ ಟಿಪ್ಪಣಿ ಸೇರಿಸುವ ಸೌಲಭ್ಯವಿದೆ. ಇಷ್ಟಲ್ಲದೆ ಈ ಬ್ಲಾಗ್‌ಗಳಿಗೆ ಆರ್‌ಎಸ್‌ಎಸ್ ಸೌಲಭ್ಯವಿದೆ. ಆರ್‌ಎಸ್‌ಎಸ್ ಎಂದರೆ ರಿಯಲಿ ಸಿಂಪಲ್ ಸಿಂಡಿಕೇಶನ್ ಎನ್ನುವುದರ ಸಂಕ್ಷಿಪ್ತ ರೂಪ. ಆರ್‌ಎಸ್‌ಎಸ್ ರೀಡರ್ ಎಂಬ ಹೆಸರಿನ ತಂತ್ರಾಂಶವನ್ನು (ಸಾಫ್ಟ್‌ವೇರ್) ಗಣಕಗಳಲ್ಲಿ (ಕಂಪ್ಯೂಟರ್) ಅಳವಡಿಸಿಕೊಂಡರೆ ಈ ಬ್ಲಾಗ್‌ಗಳನ್ನು ಗಣಕಕ್ಕೆ ಇ-ಮೈಲ್‌ಗಳನ್ನು ಇಳಿಸಿಕೊಂಡಂತೆ ಇಳಿಸಿಕೊಂಡು ಅಂತರಜಾಲ ಸಂಪರ್ಕ ಕಡಿದ ಮೇಲೂ ಓದಬಹುದು. ಬ್ಲಾಗ್ ಸುಲಭವಾಗಿ ಹೊಸ ಪುಟವನ್ನು ಸೇರಿಸುವ ಸೌಲಭ್ಯ ಹೊಂದಿದೆ. ಮಾಮೂಲಿ ಅಂತರಜಾಲ ತಾಣಗಳಿಗೆ ಈ ಸೌಲಭ್ಯವಿರುವುದಿಲ್ಲ. ಹೊಸ ಪೋಸ್ಟಿಂಗ್ ಸಾಮಾನ್ಯವಾಗಿ ಪುಟದ ಮೇಲೆ ತೋರುತ್ತದೆ. ಇನ್ನೊಂದು ಹೊಸ ಪೋಸ್ಟಿಂಗ್ ಬಂದಾಗ ಹಳೆಯ ಪೋಸ್ಟಿಂಗ್ ತಂತಾನೆ ಕೆಳಗೆ ತಳ್ಳಲ್ಪಡುತ್ತದೆ. ಟೀಕೆಯ ಕೆಳಗೆ ಇತರೆ ಓದುಗರು ಟೀಕೆಗೆ ಟೀಕೆ ಸೇರಿಸಬಹುದು. ಕೆಲವೊಮ್ಮೆ ಈ ಸರಪಣಿ ದೊಡ್ಡ ಚರ್ಚೆ ಅಥವಾ ವಾಗ್ವಾದವಾಗುವುದೂ ಇದೆ. ಎಲ್ಲ ಅಂತರಜಾಲ ತಾಣಗಳಿಗಿರುವಂತೆ ಬ್ಲಾಗ್‌ಗಳಿಗೂ ಇತರೆ ತಾಣ ಯಾ ಬ್ಲಾಗ್‌ಗಳಿಗೆ ಕೊಂಡಿ ನೀಡುವ ಸೌಲಭ್ಯವಿದೆ. ಸರಳವಾಗಿ ಹೇಳುಬೇಕೆಂದರೆ ಬ್ಲಾಗ್ ಒಬ್ಬ ವ್ಯಕ್ತಿಯ ವೈಯಕ್ತಿಕ ಅನಿಸಿಕೆಗಳನ್ನು ಜಗತ್ತಿಗೆಲ್ಲ ತಿಳಿಯುವಂತೆ ಸಾರ್ವಜನಿಕವಾಗಿ ಬರೆಯುವ ವ್ಯವಸ್ಥೆ.
ಯಾವ ಯಾವ ರೀತಿಯ ಬ್ಲಾಗ್‌ಗಳಿವೆ ಎಂಬುದನ್ನು ವೀಕ್ಷಿಸಿ ನೋಡಿದರೆ ನಮಗೆ ಅಂತರಜಾಲದಲ್ಲಿ ಎಷ್ಟು ವೈವಿಧ್ಯದ ತಾಣಗಳಿವೆಯೋ ಅಷ್ಟೂ ವೈವಿಧ್ಯ ಬ್ಲಾಗ್‌ಗಳಲ್ಲೂ ಇರುವುದು ಗೋಚರವಾಗುತ್ತದೆ. ಬ್ಲಾಗಿಗರಲ್ಲಿ ಬಹುಪಾಲು ಮಂದಿ ತಮ್ಮ ಹೊತ್ತು ಕಳೆಯಲು ಅಥವಾ ಏನಾದರೂ ಹೇಳಬೇಕು ಎನ್ನುವ ತುಡಿತ ತೀರಿಸಿಕೊಳ್ಳಲು ಬ್ಲಾಗಿಂಗ್ ಮಾಡುತ್ತಿದ್ದಾರೆ. ಹಾಗಿದ್ದರೂ ಇವರ ಬ್ಲಾಗ್‌ಗಳಲ್ಲಿ ಹಲವು ಉಪಯುಕ್ತ ಮಾಹಿತಿಗಳು ದೊರೆಯುವ ಸಾಧ್ಯತೆಗಳಿವೆ. ಬ್ಲಾಗ್ ಮಾಡುತ್ತಿರುವವರು ಕಥೆಗಾರ ಅಥವಾ ಸಾಹಿತಿಯಾಗಿದ್ದರಂತೂ ಓದುಗರಿಗೆ ಬೋನಸ್ ಎನ್ನಬಹುದು. ಪರಿಣತರಾದ ತಂತ್ರಜ್ಞರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಆಗುತ್ತಿರುವ ಹೊಸ ಸಂಶೋಧನೆಗಳ ಬಗ್ಗೆ ಪೂರ್ವಭಾವಿಯಾಗಿ ಬ್ಲಾಗ್ ಬರೆಯುವ ಮೂಲಕ ಈ ವಿಷಯಗಳಲ್ಲಿ ಆಸಕ್ತಿ ಇರುವವರಿಗೆ ಬೇಗನೆ ಮಾಹಿತಿ ಸಿಗುವಂತಾಗುತ್ತದೆ. ಉದಾಹರಣೆಗೆ ಮೈಕ್ರೋಸಾಫ್ಟ್ ಕಂಪೆನಿಯ ಹಲವು ಉದ್ಯೋಗಿಗಳು ಮುಂಬರುವ ತಂತ್ರಾಂಶಗಳ ಬಗ್ಗೆ ಬ್ಲಾಗಿಂಗ್ ಮಾಡುತ್ತಾರೆ. ಅಷ್ಟು ಮಾತ್ರವಲ್ಲ, ಈಗಿರುವ ತಂತ್ರಾಂಶಗಳ ಬಗ್ಗೆ ಸಲಹೆ ನೀಡುತ್ತಾರೆ. ಕೆಲವೊಮ್ಮೆ ಯಾವುದೇ ಗ್ರಾಹಕ ಕೈಪಿಡಿಯಲ್ಲೂ ಸಿಗದ ಮಾಹಿತಿ ಇಂತಹ ಬ್ಲಾಗ್‌ಗಳಲ್ಲಿ ದೊರೆಯುತ್ತವೆ. ಕೆಲವು ತಂತ್ರಜ್ಞರು ತಮ್ಮ ಕ್ಷೇತ್ರದಲ್ಲಿಯ ಕೆಲವು ಉಪಯುಕ್ತ ಸಲಹೆ ಕಿವಿಮಾತುಗಳನ್ನೂ ತಮ್ಮ ಬ್ಲಾಗ್‌ಗಳಲ್ಲಿ ನೀಡುತ್ತಿರುತ್ತಾರೆ. ನನ್ನ ಉದಾಹರಣೆಯನ್ನೇ ತೆಗೆದುಕೊಳ್ಳುವುದಾದರೆ ಕನ್ನಡ ಮತ್ತು ಗಣಕ ಸಂಬಂಧಿ ಸಲಹೆ ಸೂಚನೆಗಳನ್ನು ನಾನು ಆಗಾಗ ನನ್ನ ಬ್ಲಾಗ್‌ನಲ್ಲಿ (http://vishvakannada.com/Blog) ನೀಡುತ್ತಿರುತ್ತೇನೆ. ಆದುದರಿಂದ ಎಲ್ಲ ಬ್ಲಾಗ್‌ಗಳನ್ನು ಕೆಲಸವಿಲ್ಲದವರ ಗಳಹುವಿಕೆ ಎಂದು ತುಚ್ಛೀಕರಿಸುವಂತಿಲ್ಲ.
ಬ್ಲಾಗ್‌ಗಳು ಸಾಮಾಜಿಕ ಆಲೋಚನೆ ಮತ್ತು ಒತ್ತಡ ರೂಪಿಸುವ ಸಾಧನವಾಗಿಯೂ ರೂಪುಗೊಳ್ಳತೊಡಗಿದ್ದು ಸುಮಾರು ಎರಡು ಮೂರು ವರ್ಷಗಳ ಹಿಂದೆ. ಜನರು ಬ್ಲಾಗಿಂಗ್ ಮೂಲಕವೇ ಅಮೇರಿಕದ ಚುನಾವಣೆಯಲ್ಲಿ ಜನಾಭಿಪ್ರಾಯ ರೂಪಿಸಿ ಕಣದಲ್ಲಿದ್ದ ಉಮೇದುವಾರರೊಬ್ಬರು ಹಿಂದೆ ಸರಿಯುವಂತೆ ಮಾಡಿದಲ್ಲಿಂದ ಬ್ಲಾಗ್ ಒಂದು ಪ್ರಮುಖ ಅಸ್ತ್ರವಾಗತೊಡಗಿತು. ಇದು ಸಾಧ್ಯವಾಗಿದ್ದು ಬ್ಲಾಗಿಗರು ಹೆಚ್ಚು ಹೆಚ್ಚು ಸುದ್ದಿಗಳನ್ನು ಯಾವುದೇ ಸಂಪಾದಕರ ಕತ್ತರಿಗೆ ಸಿಗದಂತೆ ತಮ್ಮ ಬ್ಲಾಗ್‌ಗಳಲ್ಲಿ ದಾಖಲಿಸತೊಡಗಿದುದರಿಂದ. ಆಗ ಈ ಬ್ಲಾಗ್ ಎನ್ನುವುದು ಒಂದು ಪರ್ಯಾಯ ಪತ್ರಿಕಾ ಮಾಧ್ಯಮವೇ ಆಗಿ ಹೊರಹೊಮ್ಮುವ ಸಾಧ್ಯತೆ ಜನರಿಗೆ ವೇದ್ಯವಾಯಿತು. ಬ್ಲಾಗಿಂಗ್ ಒಂದು ಪರ್ಯಾಯ ಪತ್ರಿಕೋದ್ಯಮವೇ? ಅಥವಾ ಬ್ಲಾಗಿಂಗ್‌ನ್ನು ಪರ್ಯಾಯ ಪತ್ರಿಕೋದ್ಯಮವಾಗಿ ನಡೆಸಿಕೊಂಡು ಬರಬಹುದೇ? ಹೌದು ಎಂದು ಹೇಳಬಹುದು. ಇದು ಹೇಗೆ ಸಾಧ್ಯ? ಈ ಪ್ರಶ್ನೆಗೆ ಉತ್ತರ ನೀಡುವ ಮೊದಲು ಪತ್ರಿಕೋದ್ಯಮ ಎಂದರೇನು ಎಂದು ತಿಳಿಯೋಣ. ಪತ್ರಿಕೋದ್ಯಮ ಎನ್ನುವುದು ಜರ್ನಲಿಸಂ ಎನ್ನುವ ಇಂಗ್ಲಿಶ್ ಪದಕ್ಕೆ ಪಾರಿಭಾಷಿಕ ಪದವಾಗಿ ಬಳಕೆಯಲ್ಲಿದೆ. ಜರ್ನಲಿಸಂ ಪದವು ಜರ್ನಲ್ ಎಂಬ ಪದದಿಂದ ವ್ಯುತ್ಪತ್ತಿಯಾಗಿದೆ. ದಿನಚರಿ ಎಂಬುದು ಜರ್ನಲ್ ಪದದ ಅರ್ಥ. ದಿನಚರಿ ಇಟ್ಟುಕೊಳ್ಳುವುದು ಎಂಬುದೇ ಜರ್ನಲಿಸಂ ಪದದ ಮೂಲ ಅರ್ಥ. ಬ್ಲಾಗಿಂಗ್ ಕೂಡ ಒಂದು ರೀತಿಯಲ್ಲಿ ದಿನಚರಿಯೇ. ಹೀಗೆ ಸೈದ್ಧಾಂತಿಕವಾಗಿ ವಾದಿಸಿದರೂ ಬ್ಲಾಗಿಂಗ್ ಅನ್ನು ಪತ್ರಿಕೋದ್ಯಮ ಎನ್ನಬಹುದು. ಬ್ಲಾಗಿಂಗ್ ಪತ್ರಿಕೋದ್ಯಮ ಯಾಕೆ ಎಂದು ವಿಚಾರಿಸುವ ಮೊದಲು ಮುಖ್ಯವಾಹಿನಿಯ ಪತ್ರಿಕೆಗಳ ತೊಂದರೆಗಳನ್ನು ವಿಶ್ಲೇಷಿಸೋಣ. ಒಳಿತುಗಳ ಬಗ್ಗೆ ಹಲವು ಕಡೆ ಹಲವು ಬಾರಿ ಪುನರುಚ್ಚರಿಸಿರುವುದರಿಂದ ಅವುಗಳನ್ನು ಇಲ್ಲಿ ಇನ್ನೊಮ್ಮೆ ದಾಖಲಿಸುವ ಅಗತ್ಯವಿಲ್ಲ. ಪತ್ರಿಕೆಗಳು ಬದುಕುವುದೇ ಜಾಹೀರಾತುಗಳಿಂದ. ಜಾಹೀರಾತು ನೀಡುವವರ ವಿರುದ್ಧ ಯಾವುದೇ ಲೇಖನ ಬರೆಯಬೇಕಾದರೆ ಪತ್ರಿಕೆಗಳು ಹಿಂಜರಿಯುತ್ತವೆ. ಅದೇ ರೀತಿ ಸರಕಾರದ ವಿರುದ್ಧವೂ ಪತ್ರಿಕೆಗಳು ಬರೆಯುವಾಗ ತಮ್ಮ ಲೇಖನಿಯ ತೀಕ್ಷ್ಣತೆಯನ್ನು ಕಡಿಮೆ ಮಾಡಿಕೊಳ್ಳುತ್ತವೆ. ಯಾವ ರಾಜಿಗೂ ಒಪ್ಪದ, ಯಾವ ಒತ್ತಡಕ್ಕೂ ಮಣಿಯದ ಪತ್ರಿಕೆಗಳು ಇಲ್ಲವೇ ಇಲ್ಲವೆಂದಲ್ಲ. ಪತ್ರಿಕೆಗಳಲ್ಲಿ ಜಾಗದ ಮಿತಿಯಿರುತ್ತದೆ. ಇದರಿಂದಾಗಿ ಹಲವು ಬಾರಿ ಪ್ರಾಮುಖ್ಯವಾದ ವಿಷಯಗಳೇ ಬಿಟ್ಟುಹೋಗುವುದು ಲೇಖನಗಳಲ್ಲಿ ಸರ್ವೇಸಾಮಾನ್ಯ. ದಿನಪತ್ರಿಕೆಯೇ ಆದರೂ ಲೇಖನ ತಯಾರಿಸಿ ಅದನ್ನು ಕಳುಹಿಸಿ ಸಂಪಾದಕರು ಅದನ್ನು ಅಂಗೀಕರಿಸಿ ಅದು ಮುದ್ರಣವಾಗಿ ಹೊರಬರುವಾಗ ಕೆಲವೊಮ್ಮೆ ತಿಂಗಳುಗಳೇ ಕಳೆದಿರುತ್ತವೆ. ಏತನ್ಮಧ್ಯೆ ಅದೇ ವಿಷಯದ ಬಗ್ಗೆ ಇನ್ನೊಂದು ಪತ್ರಿಕೆಯಲ್ಲಿ ಬೇರೊಬ್ಬ ಲೇಖಕರ ಲೇಖನ ಪ್ರಕಟವಾದರಂತೂ ಮುಗಿದೇ ಹೋಯಿತು. ಲೇಖನ ನೇರವಾಗಿ ಕಸದಬುಟ್ಟಿಗೇ ಸೇರಿದಂತೆ. ಬರೆದ ಲೇಖನದ ಪ್ರತಿಯೊಂದು ವಾಕ್ಯವೂ ಸಂಪಾದಕರ ಕತ್ತರಿಯಿಂದ ಪಾರಾಗಿ ಬರುತ್ತದೆ ಎಂಬ ಧೈರ್ಯವೂ ಇಲ್ಲ.
ಇತ್ತೀಚೆಗಂತೂ ಪತ್ರಿಕೆಗಳ ಮೇಲೆ ಜನರಿಗೆ ನಂಬಿಕೆ ಕಡಿಮೆಯಾಗುತ್ತಿದೆ. ಮಾಲಿಕರಿಗೆ ಬೇಕಾದವರಿಗೆ ಹೆಚ್ಚು ಪ್ರಚಾರ, ಮಾಲಿಕರ ಸಹ ಒಡೆತನದಲ್ಲಿರುವ ಇತರೆ ಕಂಪೆನಿಗಳ ತಯಾರಿಕೆಗಳಿಗೆ ಒತ್ತು ನೀಡುವುದು, ಸಂಪಾದಕರಿಗೆ ಇಷ್ಟವಾದವರಿಗೆ ಅಥವಾ ಅವರ ಸಾಧನೆಗಳಿಗೆ ಹೆಚ್ಚು ಒತ್ತು ನೀಡುವುದು -ಇವೆಲ್ಲ ಇತ್ತೀಚೆಗೆ ಸರ್ವೇಸಾಮಾನ್ಯವಾಗುತ್ತಿವೆ. ಪತ್ರಿಕೋದ್ಯೋಗಿಗಳ ಜ್ಞಾನದ ಮಟ್ಟ ಕುಸಿಯುತ್ತಿದೆ. ಅಧ್ಯಯನಾ ಪ್ರವೃತ್ತಿಯ ಕೊರತೆಯೂ ಇಂದಿನ ಪತ್ರಿಕೋದ್ಯೋಗಿಗಳಲ್ಲಿ ಹೆಚ್ಚುತ್ತಿದೆ.
ಪತ್ರಿಕಾ ಸಂಪಾದಕರ ಜ್ಞಾನದ ಮಟ್ಟ ಕುಸಿಯುತ್ತಿರುವುದಕ್ಕೆ ಸಾಕ್ಷಿಯಾಗಿ ಒಂದು ಉದಾಹರಣೆಯನ್ನು ಇಲ್ಲಿ ನೀಡಿದರೆ ಅಪ್ರಸ್ತುತವಾಗಲಾರದು. ಸುನಾಮಿ ಭಾರತಕ್ಕೆ ಅಪ್ಪಳಿಸಿ ಸಾವಿರಾರು ಜನರ ಪ್ರಾಣಹಾನಿ ಮಾಡಿದುದು ಎಲ್ಲರಿಗೂ ತಿಳಿದೇ ಇದೆ. ಸುನಾಮಿ ಸಂಭವಿಸಿ ಒಂದೆರಡು ವಾರಗಳಲ್ಲಿ ಯಾರೊ ಒಬ್ಬ ಕಿಡಿಗೇಡಿ ಒಂದು ಕುಚೋದ್ಯ ನಡೆಸಿದ. ಆತ ಅಮೇರಿಕಾದ ನಾಸಾ ಸಂಸ್ಥೆಯ ಜಾಲತಾಣದಿಂದ ಒಂದು ಚಂಡಮಾರುತದ ಉಪಗ್ರಹಚಿತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಅದನ್ನೇ ಸುನಾಮಿಯ ಉಪಗ್ರಹಚಿತ್ರ ಎಂದು ಕೆಲವರಿಗೆ ಇಮೈಲ್ ಮೂಲಕ ಕಳುಹಿಸಿದ. ಇದು ಇಮೈಲ್ ಮೂಲಕ ಜನರಿಂದ ಜನರಿಗೆ ದಾಟಿ ಕೊನೆಗೆ ಕೆಲವು ಪತ್ರಿಕೆಗಳ ಸಂಪಾದಕರುಗಳಿಗೂ ತಲುಪಿತು. ಕನ್ನಡದ ಪತ್ರಿಕೆಯೊಂದು ಅದನ್ನು ತನ್ನ ಮುಖಪುಟದಲ್ಲೇ ಪ್ರಕಟಿಸಿತು. ಸುನಾಮಿ ಸಮುದ್ರದ ತಳದಲ್ಲಿ ನಡೆಯುವ ಪ್ರಕ್ರಿಯೆ. ಅದನ್ನು ಉಪಗ್ರಹದ ಮೂಲಕ ಚಿತ್ರಿಸಲು ಅಸಾಧ್ಯ. ಈ ಪ್ರಾಥಮಿಕ ಜ್ಞಾನ ಪತ್ರಿಕೆಯ ಸಂಪಾದಕರಿಗೆ ಇರಲಿಲ್ಲ ಎಂದರೆ ಎಷ್ಟು ಶೋಚನೀಯ ಅಲ್ಲವೇ? ಪತ್ರಿಕೆಗಳಿಗೆ ಈ ಬಗ್ಗೆ ತಿಳಿವಳಿಕೆ ನೀಡಿ ಪತ್ರ ಬರೆದರೆ ಸಂಪಾದಕರು ಅದನ್ನು ಪ್ರಕಟಿಸುವುದೇ ಇಲ್ಲ!
ಬ್ಲಾಗಿಂಗ್‌ಗೆ ಈ ಯಾವ ಸಮಸ್ಯೆಗಳೂ ಇಲ್ಲ. ಬ್ಲಾಗಿಂಗ್ ನಡೆಸುವುದು ಈಗಾಗಲೇ ತಿಳಿಸಿರುವಂತೆ ಅಂತರಜಾಲದಲ್ಲಿ. ಹೆಚ್ಚಿನ ಮಂದಿಯ ಬ್ಲಾಗ್‌ಗಳು ಇರುವುದು ಉಚಿತ ತಾಣಗಳಲ್ಲಿ. ಅಲ್ಲಿ ಜಾಗದ ಕೊರತೆ ಇಲ್ಲ. ಲೇಖನವೊಂದಕ್ಕೆ ಇಂತಿಷ್ಟೇ ಪದಗಳಿರಬೇಕೆಂಬ ಮಿತಿಯೂ ಇಲ್ಲ. ಸಂಪಾದಕರ ಅಂಕುಶ ಕತ್ತರಿಗಳಿಲ್ಲ. ಬರೆಯಬೇಕೆನಿಸಿದ್ದನ್ನು ನೇರವಾಗಿ ಜಾಲತಾಣದಲ್ಲೇ ದಾಖಲಿಸುವುದರಿಂದ ಬರೆದು ಅದು ಪ್ರಕಟವಾಗುವ ಮಧ್ಯದ ಸಮಯ ಉಳಿತಾಯವಾಗುತ್ತದೆ. ಇಲ್ಲಿ ಎಲ್ಲವೂ ಫಾಸ್ಟ್‌ಫುಡ್‌ಗಳಂತೆ. ಕ್ಷಣಕ್ಷಣದ ವ್ಯವಹಾರ. ಲೇಖನಕ್ಕೆ ಸಂಬಂಧಿಸಿದಂತೆ ಛಾಯಾಚಿತ್ರಗಳಿದ್ದರೆ ಅವುಗಳನ್ನೂ ಜಾಲತಾಣಕ್ಕೆ ಸೇರಿಸಬಹುದು. ನೇರವಾಗಿ ಘಟನೆ ನಡೆಯುತ್ತಿರುವ ಸ್ಥಳದಿಂದಲೇ ಲೇಖನವನ್ನು ಅಂತರಜಾಲಕ್ಕೆ ಸೇರಿಸಬಹುದು. ಲ್ಯಾಪ್‌ಟಾಪ್ ಮತ್ತು ಅಂತರಜಾಲ ಸಂಪರ್ಕ ಇದ್ದರೆ ಸಾಕು. ಈಗೀಗ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕೆಲವು ಅತ್ಯಾಧುನಿಕ ಮೊಬೈಲ್ ಫೋನುಗಳಿಂದ ಕೂಡ ನೇರವಾಗಿ ಈ ಎಲ್ಲ ಕೆಲಸ ನಡೆಸಬಹುದು.
ಬ್ಲಾಗಿಂಗ್‌ಗೆ ಮುಖ್ಯವಾಹಿನಿಯ ಪತ್ರಿಕೆಗಳಿಗಿರುವ ಯಾವ ತೊಡಕುಗಳೂ ಇಲ್ಲ ಎಂದು ಹೇಳಿಯಾಗಿದೆಯಷ್ಟೆ? ಬ್ಲಾಗಿಂಗ್‌ಗಿರುವ ಇನ್ನೊಂದು ಅತಿ ಮುಖ್ಯವಾದ ಸವಲತ್ತೆಂದರೆ ಓದುಗರು ತಮ್ಮ ಟೀಕೆ ಟಿಪ್ಪಣಿ ಸೇರಿಸುವ ಸೌಲಭ್ಯ. ಇದು ಪ್ರತಿಸ್ಪಂದನಾತ್ಮಕ ಅಂತರಜಾಲದಲ್ಲಿ ಮಾತ್ರ ಸಾಧ್ಯ. ಮುದ್ರಿತ ಪತ್ರಿಕೆಗಳಲ್ಲಿ ಇದು ಅಸಾಧ್ಯ. ಒಬ್ಬ ತನಗಿಷ್ಟ ಬಂದಂತೆ ಬ್ಲಾಗ್ ಬರೆಯುತ್ತಾನೆಂದಿಟ್ಟುಕೊಳ್ಳಿ. ಈಗಾಗಲೇ ಹೇಳಿರುವಂತೆ ಬ್ಲಾಗ್‌ಗೆ ಯಾವ ಸಂಪಾದಕರಿಲ್ಲ. ಹಾಗಾಗಿ ಯಾರು ಏನು ಬೇಕಾದರೂ ಬರೆಯಬಹುದು ತಾನೆ? ಸುಳ್ಳು ಸುಳ್ಳೇ ಬರೆದರೆ? ಆಗ ಓದುಗರು ಸುಮ್ಮನೆ ಬಿಡುವುದಿಲ್ಲ. ಬ್ಲಾಗಿನ ಕೆಳಗೆಯೇ ತಮ್ಮ ಟಿಪ್ಪಣಿ ಸೇರಿಸುತ್ತಾರೆ. ನೀನು ಬರೆದುದು ಸುಳ್ಳೆಂದು ಎಲ್ಲರೂ ಝಾಡಿಸುತ್ತಾರೆ. ಓದುಗರ ಪ್ರತಿಕ್ರಿಯೆಯನ್ನು ದಾಖಲಿಸದಂತೆ ಮಾಡುವ ಸೌಲಭ್ಯವೂ ಬ್ಲಾಗ್‌ನಲ್ಲಿದೆ. ಹಾಗೆ ಯಾರಾದರು ಬ್ಲಾಗಿಗರು ಆಯ್ಕೆ ಮಾಡಿಟ್ಟರೆ ಅಂತಹ ಬ್ಲಾಗಿಗೆ ಯಾರೂ ಮೂರು ಕಾಸಿನ ಬೆಲೆಯನ್ನೂ ನೀಡುವುದಿಲ್ಲ. ಅದನ್ನು ಓದುವುದೂ ಇಲ್ಲ. ಆದುದರಿಂದ ಅಂತಹ ಬ್ಲಾಗ್‌ಗಳು ಇಲ್ಲವೇ ಇಲ್ಲ ಎನ್ನುವಷ್ಟು ಕಡಿಮೆ.
ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಪತ್ರಿಕೋದ್ಯೋಗಿಗಳು ಮತ್ತು ಓದುಗರು ಎರಡು ಧ್ರುವಗಳಲ್ಲಿರುತ್ತಾರೆ. ಪತ್ರಿಕೆಯವರು ನೀಡಿದ್ದನ್ನು ಓದುಗರು ಆಯ್ಕೆಯಿಲ್ಲದೆ ಓದಬೇಕಾಗುತ್ತದೆ. ಓದುಗರು ಪತ್ರಿಕೆಯಲ್ಲಿ ಪ್ರಕಟವಾಗುವ ಸುದ್ದಿಗಳನ್ನು ನೀಡುವುದು, ಅದನ್ನು ಪತ್ರಿಕೆಯವರು ಪ್ರಕಟಿಸುವುದು ಬಹು ವಿರಳ. ಬ್ಲಾಗ್‌ಗಳಲ್ಲಿ ಹಾಗಲ್ಲ. ಓದುಗರೂ ಭಾಗವಹಿಸುತ್ತಾರೆ. ಸುನಾಮಿಯಲ್ಲಿ ಸಂತ್ರಸ್ತರಾದವರಿಗೆ ಸಹಾಯ ಮಾಡಲೆಂದು ಒಬ್ಬರು ಬ್ಲಾಗ್ ತಾಣವನ್ನು ಪ್ರಾರಂಭಿಸಿದ್ದರು. ಕಳೆದುಹೋದವರ ಫೋಟೋಗಳನ್ನು ಅಲ್ಲಿ ಹಾಕಿ ಎಲ್ಲ ಓದುಗರಿಗೆ ಕಾಣುವಂತೆ ಮಾಡಿ ಹಲವು ಮಂದಿ ತಮ್ಮ ಕಳೆದುಹೋದ ಬಾಂಧವರನ್ನು ವಾಪಾಸು ಪಡೆಯುವಂತೆ ಮಾಡಿದ್ದರು. ಅವರ ಬ್ಲಾಗ್ ತಾಣಕ್ಕೆ ಹಲವು ಮಂದಿ ಮಾಹಿತಿ ಸೇರಿಸುವ ಮೂಲಕ ಸಹಾಯಹಸ್ತ ನೀಡಿದ್ದರು.
ಹಾಗಾದರೆ ಎಲ್ಲ ಬ್ಲಾಗ್‌ಗಳೂ ಪತ್ರಿಕೋದ್ಯಮವೇ? ಖಂಡಿತ ಅಲ್ಲ. ಕೆಲವು ಬ್ಲಾಗ್‌ಗಳನ್ನು ಮಾತ್ರ ಹೊಸ ರೀತಿಯ ಪತ್ರಿಕೋದ್ಯಮ ಎಂದುಕೊಳ್ಳಬಹುದು. ಅವು ಯಾವುವು? ವೃತ್ತಿನಿರತ ಪತ್ರಿಕೋದ್ಯೋಗಿಗಳು ಬರೆದವು, ಪರಿಣತ ವೃತ್ತಿನಿರತರು ತಮ್ಮ ತಮ್ಮ ವೃತ್ತಿ ಬಗ್ಗೆ ಬರೆದವು, ಯಾವುದಾದರೊಂದು ಪ್ರಮುಖ ಘಟನೆ ಬಗ್ಗೆ ಆ ಘಟನೆ ಜರುಗಿದ ಸ್ಥಳದಿಂದ ಯಾರದರೊಬ್ಬರು ನೇರವಾಗಿ ವರದಿ ರೂಪದಲ್ಲಿ ಬರೆದವು, ಅಂತರಜಾಲದಲ್ಲಿರುವ ಇತರೆ ಸುದ್ದಿಗಳಿಗೆ ಕೊಂಡಿ ನೀಡುವಂತವು -ಇವನ್ನೆಲ್ಲ ಬ್ಲಾಗ್ ಪತ್ರಿಕೋದ್ಯಮ ಎನ್ನಬಹುದು.
ಬ್ಲಾಗ್ ಬಗ್ಗೆ ಇನ್ನೊಂದು ಪ್ರಚಲಿತ ಪದ ಎಂದರೆ ಪಾರ್ಟಿಸಿಪೇಟರಿ ಜರ್ನಲಿಸಂ ಅರ್ಥಾತ್ ಭಾಗೇದಾರಿ ಪತ್ರಿಕೋದ್ಯಮ ಎಂದು ಕರೆಯಬಹುದು. ಏನು ಹಾಗೆಂದರೆ? ವಿಕಿಪೀಡಿಯಾ ನೀಡುವ ವಿವರಣೆ ಪ್ರಕಾರ ಭಾಗೇದಾರಿ ಪತ್ರಿಕೋದ್ಯಮ ಎಂದರೆ ಸುದ್ದಿ ಮತ್ತು ಸಂಬಂಧಿತ ಮಾಹಿತಿಯ ಸಂಗ್ರಹಣೆ, ವರದಿ, ವಿಶ್ಲೇಷಣೆ ಮತ್ತು ಹಂಚುವಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು. ಇವನ್ನೆಲ್ಲ ಮಾಡುವ ವೃತ್ತಿನಿರತ ಪತ್ರಿಕೋದ್ಯೋಗಿಯಲ್ಲದವರನ್ನು ಭಾಗೇದಾರಿ ಪತ್ರಿಕಾಕರ್ತ ಎನ್ನಬಹುದು. ಬ್ಲಾಗಿಂಗ್ ಬಾಗೇದಾರಿ ಪತ್ರಿಕೋದ್ಯೋಮದ ಪ್ರಮುಖ ಅಂಗ. ಸಾರ್ವಜನಿಕರೇ ವರದಿಗಾರರಾಗಿರುವ ತುಂಬ ಪ್ರಖ್ಯಾತವಾಗಿರುವ ಅಂತರಜಾಲ ತಾಣ ದಕ್ಷಿಣ ಕೊರಿಯಾದ ಓಹ್ ಮೈ ನ್ಯೂಸ್ (http://www.ohmynews.com/). ಸಿಟಿಝನ್ ಜರ್ನಲಿಸಂ ಎನ್ನುವ ಪದ ಈ ತಾಣದಿಂದ ಖ್ಯಾತಿಯನ್ನು ಪಡೆಯಿತು. ಭಾಗೇದಾರಿ ಪತ್ರಿಕಾಕರ್ತರಿಂದಲೇ ನಡೆಸಲ್ಪಡುವ ಸುದ್ದಿ ಮತ್ತು ವಿಶ್ಲೇಷಣೆಗಳ ಅಂತರಜಾಲ ತಾಣ ಇದಾಗಿದೆ.
ಭಾರತದಲ್ಲೂ ಬಾಗೇದಾರಿ ಪತ್ರಿಕಾಕರ್ತರಿದ್ದಾರೆ. ಇವರಲ್ಲಿ ಒಂದು ಪ್ರಮುಖ ವಿಭಾಗ ಎಂದರೆ ಮುಖ್ಯವಾಹಿನಿಯ ಪತ್ರಿಕೆಗಳ ಮೇಲೆ ಕಾವಲುನಾಯಿಯಂತೆ ಕೆಲಸ ಮಾಡುವವರು. ಕನ್ನಡ ಭಾಷೆಯ ನೂರೆಂಟುಸುಳ್ಳು (http://noorentusullu.blogspot.com/) ಇದಕ್ಕೆ ಒಂದು ಉದಾಹರಣೆ. ಈ ಬ್ಲಾಗ್‌ನಲ್ಲಿ ಮುಖ್ಯವಾಗಿ ಕನ್ನಡ ಪತ್ರಿಕೆಗಳಲ್ಲಿ ಪ್ರಕಟವಾಗುವ ತಪ್ಪುಗಳನ್ನು ಆಗಾಗ ಎತ್ತಿ ತೋರಿಸಲಾಗುತ್ತಿದೆ. ಕನ್ನಡ ಪತ್ರಿಕೆಗಳಲ್ಲಿ ಎಂದು ಹೇಳಿದರೂ, ಈ ಬ್ಲಾಗ್ ನಡೆಸುವವರೇ ಹೇಳಿಕೊಂಡಂತೆ, ಕನ್ನಡದ ಪ್ರಮುಖ ಪತ್ರಿಕೆಯೊಂದರಲ್ಲಿ ಪ್ರಕಟವಾಗುವ ನೂರೆಂಟುಮಾತು ಅಂಕಣವನ್ನು ವಿಶ್ಲೇಷಿಸಲೆಂದೇ ಈ ಬ್ಲಾಗ್ ಹುಟ್ಟಿಕೊಂಡದ್ದು. ನೂರೆಂಟುಮಾತು ಅಂಕಣಕಾರರೇನೋ ಈ ಬ್ಲಾಗನ್ನು ಸ್ಪೋರ್ಟಿವ್ ಆಗಿ ತೆಗೆದುಕೊಂಡದ್ದು ಮಾತ್ರವಲ್ಲ ತಮ್ಮ ಪತ್ರಿಕೆಯಲ್ಲಿ ಒಂದು ಹುದ್ದೆಯನ್ನೇ ಈ ಬ್ಲಾಗಿಗರಿಗಾಗಿ ಹುಟ್ಟು ಹಾಕಿ ಅವರನ್ನು ಆ ಹುದ್ದೆಯನ್ನು ಸ್ವೀಕರಿಸಲು ಆಹ್ವಾನಿಸಿದ್ದರು. ಅವರು ಅದನ್ನು ಸ್ವೀಕರಿಸಲಿಲ್ಲ ಎಂಬುದು ಬೇರೆ ವಿಷಯ.
ಆದರೆ ಭಾರತದ ಇಂಗ್ಲಿಶ್ ಪತ್ರಿಕೋದ್ಯಮದ ದೈತ್ಯ ಟೈಂಸ್ ಆಫ್ ಇಂಡಿಯಾ ಮಾತ್ರ ತಾನು ಯಾರನ್ನು ಬೇಕಾದರೂ ಟೀಕಿಸಬಹುದು ಅದರೆ ತನ್ನನ್ನು ಯಾರೂ ಟೀಕಿಸಬಾರದು ಎಂಬ ನಿಲುವನ್ನು ತಾಳಿದೆ. ಮೀಡಿಯಾಹ್ (http://mediaah.blogspot.com/) ಎಂಬ ಹೆಸರಿನಲ್ಲಿ ಪ್ರದ್ಯುಮ್ನ ಮಹೇಶ್ವರಿ ಎಂಬವರು ಒಂದು ಬ್ಲಾಗ್ ನಡೆಸುತ್ತಿದ್ದರು. ಅದರಲ್ಲಿ ಅವರು ತಮ್ಮನ್ನು ಟೀಕಿಸಿದ್ದಕ್ಕೆ ಟೈಂಸ್ ಆಫ್ ಇಂಡಿಯಾದವರು ವಕೀಲರ ಮೂಲಕ ನೋಟೀಸು ಜಾರಿ ಮಾಡಿದ್ದರು. ಟೈಂಸ್ ಆಫ್ ಇಂಡಿಯಾದಂತಹ ದೈತ್ಯನ ವಿರುದ್ಧ ಏಕಾಕಿಯಾಗಿ ಹೋರಾಡಲು ನನ್ನಿಂದ ಅಸಾಧ್ಯ ಎಂದು ಘೋಷಿಸಿದ ಪ್ರದ್ಯುಮ್ನರು ತಮ್ಮ ಬ್ಲಾಗನ್ನೇ ತೆಗೆದುಬಿಟ್ಟರು. ಆದರೆ ಭಾರತದ ಬ್ಲಾಗ್ ಮಂಡಲವನ್ನೇ ಈಸುದ್ದಿ ಅಲ್ಲಾಡಿಸಿಬಿಟ್ಟಿತು. ಪ್ರದ್ಯುಮ್ನರ ಪರವಾಗಿ ಎಲ್ಲ ಬ್ಲಾಗಿಗರು ಒಂದಾದರು. ಒಬ್ಬರು ಪ್ರದ್ಯುಮ್ನರ ಬ್ಲಾಗನ್ನು ನಕಲು ಮಾಡಿ ತಮ್ಮ ಬ್ಲಾಗಿನಲ್ಲಿ ಹಾಕಿದರು (http://mediaha.blogspot.com/). ಮತ್ತೊಬ್ಬರು ಅಂತರಜಾಲದಲ್ಲೇ ಟೈಂಸ್‌ನವರಿಗೆ ತಮ್ಮ ನೋಟೀಸು ವಾಪಾಸು ತೆಗೆದುಕೊಳ್ಳುವಂತೆ ಒಂದು ಮನವಿ ನಿರ್ಮಿಸಿದರು (http://www.petitiononline.com/mediaahp/petition.html). ಈ ಮನವಿಗೆ ೫೦೦ಕ್ಕೂ ಹೆಚ್ಚು ಬ್ಲಾಗಿಗರು ಸಹಿ ಹಾಕಿದರು. ಭಾರತೀಯ ಬ್ಲಾಗ್ ಮಂಡಲದಲ್ಲೇ ಇದೊಂದು ತುಂಬ ಪ್ರಚಾರವನ್ನು ಪಡೆದ ಘಟನೆ.
ಒಟ್ಟಿನಲ್ಲಿ ಹೇಳುವುದಾದರೆ ಮುಖ್ಯವಾಹಿನಿಯ ಪತ್ರಿಕೋದ್ಯಮಕ್ಕೆ ಒಂದು ರೀತಿಯಲ್ಲಿ ಪರ್ಯಾಯವಾಗಿ ಬ್ಲಾಗಿಂಗ್ ಬೆಳೆಯುತ್ತಿದೆ. ಮುಖ್ಯವಾಹಿನಿಯ ಮಾಧ್ಯಮಗಳು ಇದನ್ನು ಗಂಭೀರವಾಗಿ ಪರಿಗಣಿಸತೊಡಗಿವೆ.
(೨೦೦೬ನೆ ಇಸವಿಯ ನವಂಬರ್ ೧೯ ರಂದು ಬರೆದದ್ದು)

ಸೋಮವಾರ, ಮೇ 12, 2008
ಸೋಮವಾರ, ಮಾರ್ಚ್ 17, 2008
ಇ-ಕಸ ಎಂಬ ಹೈಟೆಕ್ ಕಸಾಸುರ
ಮಹೇಶ್ ಮಲ್ನಾಡ್
ಬೆಂಗಳೂರು ಬೆಳೆದಂತೆಲ್ಲಾ ಐಟಿ ಉದ್ಯಮ,ಎಲೆಕ್ಟ್ರಾನಿಕ್ ಉದ್ಯಮ ಬೆಳೆಯುತ್ತಾ ಹೋಯಿತು. ಅದರ ಜೊತೆಗೆ ಈ ಉದ್ಯಮಗಳಿಂದ ಬಿಸಾಕಲ್ಪಟ್ಟ ಎಲೆಕ್ಟ್ರಾನಿಕ್ ಸಾಮಾಗ್ರಿಗಳು 'ಇ-ಕಸ' ಎಂಬ ಸಂತತಿಗೆ ನಾಂದಿ ಹಾಡಿತು.
ಏನಿದು ಇ-ಕಸ? ಮುಂದೆ ಓದಿ

ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)