ಟಿ. ಜಿ. ಶ್ರೀನಿಧಿ
ಹೊಸ ಮಾದರಿ ಮೊಬೈಲ್ ಫೋನುಗಳನ್ನು ಪರಿಚಯಿಸುವ ವೀಡಿಯೋಗಳನ್ನು ನೀವು ಯೂಟ್ಯೂಬ್ನಲ್ಲಿ ನೋಡಿರಬಹುದು. ಇಂತಹ ಬಹುತೇಕ ವೀಡಿಯೋಗಳು ಪ್ರಾರಂಭವಾಗುವುದು ಮೊಬೈಲ್ ಇಟ್ಟಿರುವ ಪೆಟ್ಟಿಗೆಯನ್ನು (ಬಾಕ್ಸ್) ತೆರೆದು ಅದರೊಳಗೆ ಏನೆಲ್ಲ ಇದೆ ಎಂದು ಹೇಳುವ ಮೂಲಕ. ಹಾಗಾಗಿಯೇ ಈ ಪರಿಚಯಗಳನ್ನು 'ಅನ್ಬಾಕ್ಸಿಂಗ್' ಎಂದೂ ಕರೆಯುತ್ತಾರೆ.
ಈ ಪರಿಕಲ್ಪನೆಗೆ ಇನ್ನೊಂದು ಆಯಾಮವೂ ಇದೆ. ಆನ್ಲೈನ್ ಅಂಗಡಿಗಳಿಂದ ಮೊಬೈಲ್ ತರಿಸುವ ನಾವು ಮನೆಯಲ್ಲೇ ಅನ್ಬಾಕ್ಸ್ ಮಾಡುತ್ತೇವೆ: ಪ್ಲಾಸ್ಟಿಕ್ ಹೊರಕವಚವನ್ನು ಹರಿದು, ಪೆಟ್ಟಿಗೆಯ ಮೇಲಿನ ಸೀಲ್ ಒಡೆದು ಮೊಬೈಲನ್ನು ಹೊರತೆಗೆಯುತ್ತೇವೆ.
ಇದರ ನಂತರದಲ್ಲೂ ಮೊಬೈಲನ್ನು ಅಂಗಡಿಗೆ ಮರಳಿಸುವಂತಹ ಸನ್ನಿವೇಶ ಕೆಲವೊಮ್ಮೆ ಎದುರಾಗುತ್ತದೆ.
ಸೋಮವಾರ, ಮೇ 29, 2017
ಗುರುವಾರ, ಮೇ 25, 2017
ಬ್ಲೂಟೂತ್: ಒಂದು ಪರಿಚಯ
ಟಿ. ಜಿ. ಶ್ರೀನಿಧಿ
ವಿಚಿತ್ರ ಹೆಸರಿನಿಂದ ಗಮನಸೆಳೆಯುವ ತಂತ್ರಜ್ಞಾನಗಳ ಪೈಕಿ 'ಬ್ಲೂಟೂತ್'ಗೆ ವಿಶೇಷ ಸ್ಥಾನವಿದೆ. ಪರಸ್ಪರ ಸಮೀಪದಲ್ಲಿರುವ ವಿದ್ಯುನ್ಮಾನ ಸಾಧನಗಳ ನಡುವೆ ನಿಸ್ತಂತು (ವೈರ್ಲೆಸ್) ಸಂವಹನ ಹಾಗೂ ಕಡತಗಳ ವಿನಿಮಯವನ್ನು ಸಾಧ್ಯವಾಗಿಸುವುದು ಈ ತಂತ್ರಜ್ಞಾನದ ವೈಶಿಷ್ಟ್ಯ.
ಮೊದಲಿಗೆ ಮೊಬೈಲ್ ಫೋನುಗಳ ನಡುವೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಬ್ಲೂಟೂತ್ ತಂತ್ರಜ್ಞಾನ ವ್ಯಾಪಕವಾಗಿ ಬಳಕೆಯಾಗುತ್ತಿತ್ತು. ಈಚೆಗೆ ವೈ-ಫೈ ತಂತ್ರಜ್ಞಾನ ಆಧರಿತ 'ಶೇರ್ಇಟ್'ನಂತಹ ಸೌಲಭ್ಯಗಳು ಬಂದಮೇಲೆ ಆ ಬಗೆಯ ಬಳಕೆ ಕೊಂಚ ಕಡಿಮೆಯಾಗಿದೆ.

ಸೋಮವಾರ, ಮೇ 22, 2017
ಗೂಗಲ್ ಗುರುವಿನ ಒಂದಷ್ಟು ಗುಟ್ಟುಗಳು
ಟಿ. ಜಿ. ಶ್ರೀನಿಧಿ
ವಿಶ್ವವ್ಯಾಪಿ ಜಾಲದಲ್ಲಿ ಏನು ಮಾಹಿತಿ ಬೇಕಿದ್ದರೂ ಅದನ್ನು ಗೂಗಲ್ನಲ್ಲಿ ಹುಡುಕಿಕೊಳ್ಳುವುದು ನಮ್ಮೆಲ್ಲರ ಅಭ್ಯಾಸ. ಹೀಗೆ ಹುಡುಕಲು ಹೊರಟಾಗ ನಾವು ಟೈಪ್ ಮಾಡುತ್ತೇವಲ್ಲ ಪದಗಳು, ಅವನ್ನು ಕೀವರ್ಡ್ಗಳೆಂದು (ಕನ್ನಡದಲ್ಲಿ 'ಹುಡುಕುಪದ') ಕರೆಯುತ್ತಾರೆ. ನಾವು ಹುಡುಕುತ್ತಿರುವ ವಿಷಯವನ್ನು ಆದಷ್ಟೂ ನಿಖರವಾಗಿ ಪ್ರತಿನಿಧಿಸುವ ಕೀವರ್ಡ್ಗಳನ್ನು ಆರಿಸಿಕೊಂಡರೆ ನಮಗೆ ಸರಿಯಾದ ಮಾಹಿತಿ ಸಿಗುವ ಸಾಧ್ಯತೆ ಜಾಸ್ತಿ. ಅಷ್ಟೇ ಅಲ್ಲ, ಪಠ್ಯ-ಚಿತ್ರ-ವೀಡಿಯೋ ಮುಂತಾದ ಹಲವು ರೂಪಗಳ ಪೈಕಿ ನಾವು ಯಾವ ಬಗೆಯ ಮಾಹಿತಿಯನ್ನು ಹುಡುಕುತ್ತಿದ್ದೇವೆ ಎನ್ನುವುದನ್ನೂ ನಾವು ಗೂಗಲ್ಗೆ ಹೇಳಬಹುದು.

ಗುರುವಾರ, ಮೇ 18, 2017
ಮೊಬೈಲ್ ಫೋನಿನ ವಿಧವಿಧ ರೂಪ
ಟಿ. ಜಿ. ಶ್ರೀನಿಧಿ
ಮಾರುಕಟ್ಟೆಯಲ್ಲಿ ದೊರಕುವ ಮೊಬೈಲ್ ಫೋನುಗಳಲ್ಲಿ ನೂರೆಂಟು ವಿಧ - ಬೇರೆಬೇರೆ ನಿರ್ಮಾತೃಗಳು, ಬೇರೆಬೇರೆ ಗಾತ್ರ, ಬೇರೆಬೇರೆ ಸವಲತ್ತುಗಳನ್ನು ಇಲ್ಲಿ ನಾವು ಕಾಣಬಹುದು. ವೈವಿಧ್ಯ ಕಡಿಮೆಯಿರುವುದು ಬಹುಶಃ ಮೊಬೈಲುಗಳ ಆಕಾರ ಹಾಗೂ ಸ್ವರೂಪದಲ್ಲಿ ಮಾತ್ರವೇ ಇರಬೇಕು.

ಸೋಮವಾರ, ಮೇ 15, 2017
ಜಿಯೋಫೆನ್ಸಿಂಗ್ ಎಂಬ ಡಿಜಿಟಲ್ ಬೇಲಿ
ಟಿ. ಜಿ. ಶ್ರೀನಿಧಿ
ಹೋಟಲಿನಿಂದ ಊಟ-ತಿಂಡಿ ತರಿಸಲು, ಎಲ್ಲಿಗೋ ಹೋಗಬೇಕಾದಾಗ ಆಟೋ-ಟ್ಯಾಕ್ಸಿ ಕರೆಸಲು ಮೊಬೈಲ್ ಆಪ್ ಬಳಸುವ ಅಭ್ಯಾಸ ನಗರಗಳಲ್ಲಿ ವ್ಯಾಪಕವಾಗಿದೆ. ಇಂತಹ ಆಪ್ಗಳನ್ನು ಬಳಸುವಾಗ ನಾವೊಂದು ಕುತೂಹಲದ ಸಂಗತಿಯನ್ನು ಗಮನಿಸಬಹುದು - ಒಂದೇ ಆಪ್ನಲ್ಲಿ ನಮ್ಮ ಮನೆ ವಿಳಾಸ ಹಾಕಿದಾಗ ದೊರಕುವ ಹೋಟಲುಗಳ ಪಟ್ಟಿಗೂ ಪಕ್ಕದ ಬೀದಿಗೆ ಊಟ ತಂದುಕೊಡಬಲ್ಲ ಹೋಟಲುಗಳ ಪಟ್ಟಿಗೂ ನಡುವೆ ಕೆಲವೊಮ್ಮೆ ವ್ಯತ್ಯಾಸಗಳಿರುತ್ತವೆ;

ಗುರುವಾರ, ಮೇ 11, 2017
ಹೂ ಇಸ್ WHOIS?
ಟಿ. ಜಿ. ಶ್ರೀನಿಧಿ
ವಿಶ್ವವ್ಯಾಪಿ ಜಾಲದಲ್ಲಿ (ವರ್ಲ್ಡ್ವೈಡ್ ವೆಬ್) ಅಪಾರ ಸಂಖ್ಯೆಯ ಜಾಲತಾಣಗಳಿವೆ. ಹೊರಪ್ರಪಂಚದ ಸೈಟುಗಳಂತೆಯೇ ವೆಬ್ಲೋಕದ ಈ ಸೈಟುಗಳಿಗೂ ಮಾಲೀಕರಿರುತ್ತಾರೆ. ಮನೆಕಟ್ಟಲು ಸೈಟು ಕೊಳ್ಳುವಾಗ ಮಾಡುವಂತೆ ಜಾಲತಾಣವನ್ನು ನೋಂದಾಯಿಸುವಾಗಲೂ ಅದನ್ನು ಕೊಳ್ಳುತ್ತಿರುವವರು ಯಾರು ಎನ್ನುವುದರ ಬಗ್ಗೆ ಮಾಹಿತಿ ನೀಡಬೇಕಾದ್ದು ಕಡ್ಡಾಯ.
ಜಾಲತಾಣಗಳನ್ನು ನಮ್ಮ ಹೆಸರಿಗೆ ನೋಂದಾಯಿಸಿಕೊಡುವ 'ರಿಜಿಸ್ಟ್ರಾರ್'ಗಳೆಂಬ ಸಂಸ್ಥೆಗಳು 'ದಿ ಇಂಟರ್ನೆಟ್ ಕಾರ್ಪೊರೇಶನ್ ಫಾರ್ ಅಸೈನ್ಡ್ ನೇಮ್ಸ್ ಆಂಡ್ ನಂಬರ್ಸ್' (ಐಕ್ಯಾನ್) ಎಂಬ ಜಾಗತಿಕ ಸಂಘಟನೆಯ ಪರವಾಗಿ ಈ ಮಾಹಿತಿಯನ್ನು ಸಂಗ್ರಹಿಸಿ ಶೇಖರಿಸಿಡುತ್ತವೆ.

ಸೋಮವಾರ, ಮೇ 8, 2017
ಇದು ಜೂಮ್ ಸಮಾಚಾರ!
ಟಿ. ಜಿ. ಶ್ರೀನಿಧಿ
ಕ್ಯಾಮೆರಾಗಳ ಬಗ್ಗೆ ಮಾತನಾಡುವಾಗ ಸಾಮಾನ್ಯವಾಗಿ ಪ್ರಸ್ತಾಪವಾಗುವ ವಿಷಯ 'ಜೂಮ್'. ಕ್ಯಾಮೆರಾ ಮುಂದಿನ ದೃಶ್ಯದ ನಿರ್ದಿಷ್ಟ ಭಾಗವನ್ನು ಹಿಗ್ಗಿಸಿ ತೋರಿಸುವ ಸೌಲಭ್ಯ ಇದು.
ಜೂಮ್ನಲ್ಲಿ ಎರಡು ವಿಧ - ಆಪ್ಟಿಕಲ್ ಜೂಮ್ ಹಾಗೂ ಡಿಜಿಟಲ್ ಜೂಮ್.

ಗುರುವಾರ, ಮೇ 4, 2017
ಹೆದರಿಸುವ ವ್ಯವಹಾರ
ಟಿ. ಜಿ. ಶ್ರೀನಿಧಿ
"ನಿಮ್ಮ ಕಂಪ್ಯೂಟರಿಗೆ ವೈರಸ್ ಬಂದಿದೆ", "ನಿಮ್ಮ ಫೋನಿನ ಮಾಹಿತಿ ಸುರಕ್ಷಿತವಾಗಿಲ್ಲ" ಎಂದೆಲ್ಲ ಹೆದರಿಸುವ ಜಾಹೀರಾತುಗಳು ಹಲವು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವುದನ್ನು ನೀವು ಗಮನಿಸಿರಬಹುದು. ನಾವು ಬಳಸುತ್ತಿರುವ ಆಂಟಿವೈರಸ್ ತಂತ್ರಾಂಶ ಇಂತಹುದೊಂದು ಸಂದೇಶ ಪ್ರದರ್ಶಿಸಿದರೆ ಓಕೆ, ಆದರೆ ಯಾವುದೋ ಜಾಲತಾಣದಲ್ಲಿ ಕಾಣಿಸಿಕೊಳ್ಳುವ ಜಾಹೀರಾತಿಗೆ ನಮ್ಮ ಕಂಪ್ಯೂಟರಿನ ಆರೋಗ್ಯ ಕೆಟ್ಟಿದ್ದು ಗೊತ್ತಾಗುವುದು ಹೇಗೆ?

ಸೋಮವಾರ, ಮೇ 1, 2017
ಕೀಬೋರ್ಡ್ ಕೆಲಸಮಾಡುವುದು ಹೇಗೆ?
ಟಿ. ಜಿ. ಶ್ರೀನಿಧಿ
ಕಂಪ್ಯೂಟರ್ ಬಳಕೆದಾರರಿಗೆಲ್ಲ ಚಿರಪರಿಚಿತ ಯಂತ್ರಾಂಶ ಕೀಬೋರ್ಡ್. ಕೀಲಿಗಳನ್ನು ಒತ್ತುವ ಮೂಲಕ ಬಳಕೆದಾರರು ಹೇಳಹೊರಟಿರುವುದನ್ನು ಕಂಪ್ಯೂಟರಿಗೆ ತಲುಪಿಸುವುದು ಈ ಸಾಧನದ ಜವಾಬ್ದಾರಿ. ನೋಡಲು ಅದೆಷ್ಟು ಸರಳವೆಂದು ತೋರಿದರೂ ಕೀಬೋರ್ಡ್ ಮಾಡುವ ಕೆಲಸ ಸಾಕಷ್ಟು ಸಂಕೀರ್ಣವಾದ್ದು.

ಗುರುವಾರ, ಏಪ್ರಿಲ್ 27, 2017
ಡಿಜಿಟಲ್ ಸಿಗ್ನೇಚರ್: ಇದು ಇ-ಲೋಕದ ಆಟೋಗ್ರಾಫ್!
ಟಿ. ಜಿ. ಶ್ರೀನಿಧಿ
ಪತ್ರಗಳು, ಕಡತಗಳು ಭೌತಿಕ ರೂಪದಲ್ಲಿದ್ದಾಗ ಅವುಗಳ ಅಧಿಕೃತತೆಯನ್ನು ಪರಿಶೀಲಿಸುವುದು ಸುಲಭವಿತ್ತು. ಪತ್ರದ ಕೊನೆಯಲ್ಲಿ ಯಾರ ಸಹಿಯಿದೆ, ಜೊತೆಗಿರುವ ಮೊಹರಿನಲ್ಲಿ ಅವರ ಹುದ್ದೆಯ ಯಾವ ವಿವರಗಳಿವೆ ಎನ್ನುವುದನ್ನು ನೋಡಿದರೆ ಪತ್ರ ಅಧಿಕೃತವೋ ಅಲ್ಲವೋ ಎನ್ನುವುದನ್ನು ನಾವು ಅಂದಾಜಿಸಬಹುದಿತ್ತು.
ಆದರೆ ಈಗ ಪತ್ರಗಳು - ದಾಖಲೆಗಳು ಭೌತಿಕ ರೂಪದಲ್ಲಿರುವುದೇ ಅಪರೂಪ. ಇಂತಹ ಕಡತಗಳು ಅಧಿಕೃತವೋ ಅಲ್ಲವೋ ಎಂದು ತಿಳಿಯುವುದು ಹೇಗೆ?

ಬುಧವಾರ, ಏಪ್ರಿಲ್ 26, 2017
ಇನ್ನೊಂದು ವರ್ಷ, ಇನ್ನಷ್ಟು ಕನಸು
ಇಜ್ಞಾನ ಜಾಲತಾಣ ಶುರುವಾದದ್ದು ೨೦೦೭ರ ಏಪ್ರಿಲ್ ೨೬ರಂದು. ಹತ್ತು ವರ್ಷ ಪೂರೈಸಿ ಹನ್ನೊಂದಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ನಿಮ್ಮೆಲ್ಲರ ಪ್ರೋತ್ಸಾಹಕ್ಕಾಗಿ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಮುಂಬರುವ ವರ್ಷಕ್ಕೆ ಇಜ್ಞಾನ ಅನೇಕ ಹೊಸ ಕಾರ್ಯಕ್ರಮಗಳನ್ನು ಯೋಜಿಸಿದೆ, ನಮಗೆ ನಿಮ್ಮ ಬೆಂಬಲ ಹೀಗೆಯೇ ಇರಲಿ!
ಸೋಮವಾರ, ಏಪ್ರಿಲ್ 24, 2017
ಪ್ಲಗ್-ಇನ್ ಎಂದರೇನು?
ಟಿ. ಜಿ. ಶ್ರೀನಿಧಿ
ತಂತ್ರಾಂಶಗಳು ಎಷ್ಟೆಲ್ಲ ಕೆಲಸ ಮಾಡಿದರೂ ನಮಗೆ ಅದರಲ್ಲಿ ಒಂದಲ್ಲ ಒಂದು ಕೊರತೆ ಕಾಣಸಿಗುವುದು ಸಾಮಾನ್ಯ. ಬ್ರೌಸರ್ ವಿಷಯವನ್ನೇ ತೆಗೆದುಕೊಳ್ಳಿ - ಬೇರೆಬೇರೆ ಜಾಲತಾಣಗಳ ಸೇವೆಯನ್ನು, ನಮ್ಮ ಕಂಪ್ಯೂಟರಿನಲ್ಲಿರುವ ಇತರ ತಂತ್ರಾಂಶಗಳನ್ನು ಬ್ರೌಸರ್ ಕಿಟಕಿಯಿಂದಲೇ ಬಳಸುವಂತಿದ್ದರೆ ಎಷ್ಟು ಚೆಂದ ಅಲ್ಲವೇ?

ಶುಕ್ರವಾರ, ಏಪ್ರಿಲ್ 21, 2017
ಕಂಪ್ರೆಶನ್ ಕರಾಮತ್ತು
ಟಿ. ಜಿ. ಶ್ರೀನಿಧಿ
ಡಿಜಿಟಲ್ ರೂಪದ ಪ್ರತಿ ಕಡತಕ್ಕೂ ಅದರಲ್ಲಿರುವ ಮಾಹಿತಿಯ ಪ್ರಮಾಣಕ್ಕೆ ಅನುಗುಣವಾಗಿ ಒಂದು ನಿರ್ದಿಷ್ಟ ಗಾತ್ರ ಇರುತ್ತದೆ. ಬಿಟ್-ಬೈಟ್ಗಳಲ್ಲಿ ಅಳೆಯುವುದು ಈ ಗಾತ್ರವನ್ನೇ. ಕಡತದ ಗಾತ್ರ ದೊಡ್ಡದಾದರೆ ಅದನ್ನು ಉಳಿಸಿಡಲು ಹೆಚ್ಚಿನ ಸ್ಥಳಾವಕಾಶ ಬೇಕು. ನಾವೇ ಉಳಿಸಿಟ್ಟುಕೊಳ್ಳುವುದಾದರೆ ಸರಿ; ಆದರೆ ಬೇರೆಯವರಿಗೆ ಕಳುಹಿಸಬೇಕೆಂದರೆ ತೀರಾ ದೊಡ್ಡ ಕಡತಗಳನ್ನು ಕಳುಹಿಸುವುದು ಕಷ್ಟ. ಇದಕ್ಕಾಗಿ ಬಳಕೆಯಾಗುವುದೇ ಕಡತದ ಗಾತ್ರವನ್ನು ಕಡಿಮೆಮಾಡುವ 'ಕಂಪ್ರೆಶನ್' ತಂತ್ರ. ಸಾಮಾನ್ಯ ಬಳಕೆಯಲ್ಲಿ "ಜಿಪ್ ಮಾಡುವುದು" ಎಂದು ಗುರುತಿಸುವುದು ಇದನ್ನೇ.

ಸೋಮವಾರ, ಏಪ್ರಿಲ್ 17, 2017
ಬಾಟ್ಗಳ ಲೋಕದಲ್ಲಿ...
ಟಿ. ಜಿ. ಶ್ರೀನಿಧಿ
ಹಲವು ಕೆಲಸಗಳನ್ನು ಸ್ವಯಂಚಾಲಿತವಾಗಿ ಮಾಡಬಲ್ಲ ಯಂತ್ರಗಳನ್ನು ರೋಬಾಟ್ಗಳೆಂದು ಕರೆಯುವುದು ನಮಗೆ ಗೊತ್ತಲ್ಲ, ಅಂತರಜಾಲದ ಲೋಕದಲ್ಲೂ ರೋಬಾಟ್ಗಳಿವೆ. ಕಣ್ಣಿಗೆ ಕಾಣುವ ರೋಬಾಟ್ಗಳು ಹಲವು ಯಂತ್ರಾಂಶಗಳ ಜೋಡಣೆಯಿಂದ ರೂಪುಗೊಂಡಿದ್ದರೆ ಜಾಲಜಗತ್ತಿನ ರೋಬಾಟ್ಗಳು ಬರಿಯ ತಂತ್ರಾಂಶಗಳಷ್ಟೇ!
ಇವುಗಳನ್ನು 'ಬಾಟ್'ಗಳೆಂದು ಗುರುತಿಸುವುದು ಸಾಮಾನ್ಯ ಅಭ್ಯಾಸ. ಬಾಟ್ ಎನ್ನುವುದು 'ರೋಬಾಟ್' ಎಂಬ ಹೆಸರಿನ ಹ್ರಸ್ವರೂಪ.

ಗುರುವಾರ, ಏಪ್ರಿಲ್ 13, 2017
ಅನಗತ್ಯ ಸಂದೇಶಗಳನ್ನು ತಪ್ಪಿಸೋಣ!
ಟಿ. ಜಿ. ಶ್ರೀನಿಧಿ
ಇಮೇಲ್, ಫೇಸ್ಬುಕ್, ವಾಟ್ಸ್ಆಪ್ಗಳೆಲ್ಲವುದರ ಮೂಲಕ ಸಂದೇಶಗಳನ್ನು ಕಳುಹಿಸುವುದು ಬಹಳ ಸುಲಭ. ಒಂದು ಸಂದೇಶವನ್ನು ಒಬ್ಬರಿಗಷ್ಟೇ ಏಕೆ, ನಮ್ಮ ಅಡ್ರೆಸ್ ಬುಕ್ನಲ್ಲಿರುವ ಅಷ್ಟೂ ವಿಳಾಸಗಳಿಗೆ - ಮೊಬೈಲ್ ಸಂಖ್ಯೆಗಳಿಗೆ ಥಟ್ಟನೆ ಕಳುಹಿಸಿಬಿಡಬಹುದು.
ಈ ಸೌಕರ್ಯ ಬಹು ಉಪಯುಕ್ತ, ಸರಿ. ಆದರೆ ಹಲವು ಸಂದರ್ಭಗಳಲ್ಲಿ ಅನಪೇಕ್ಷಿತ ಹಾಗೂ ನಿರುಪಯುಕ್ತ (ಕೆಲವೊಮ್ಮೆ ಅಸಂಬದ್ಧ) ಸಂದೇಶಗಳನ್ನು ಹಂಚಲು ಈ ಮಾಧ್ಯಮಗಳು ಬಳಕೆಯಾಗುತ್ತಿರುವುದನ್ನು ನಾವು ನೋಡಬಹುದು. ಇದನ್ನು ತಪ್ಪಿಸಲು ಹಲವು ಮಾರ್ಗಗಳಿವೆ.

ಸೋಮವಾರ, ಏಪ್ರಿಲ್ 10, 2017
ಕಳೆದ ಮೊಬೈಲು ಹುಡುಕೋದು ಹೇಗೆ?
ಟಿ. ಜಿ. ಶ್ರೀನಿಧಿ
ಮೊಬೈಲ್ ಫೋನುಗಳು ನಮ್ಮ ಜೀವನದ ಅವಿಭಾಜ್ಯ ಅಂಗವೇ ಆಗಿಬಿಟ್ಟಿವೆಯಲ್ಲ, ಹಾಗಾಗಿ ಅವನ್ನು ನಾವು ಹೋದಲ್ಲೆಲ್ಲ ಕೊಂಡೊಯ್ಯುವ ಅಭ್ಯಾಸವೂ ಸಾಮಾನ್ಯವಾಗಿದೆ. ಕೆಲಸದ ಗಡಿಬಿಡಿಯಲ್ಲಿ ಫೋನನ್ನು ಎಲ್ಲೋ ಮರೆತು ಪರದಾಡುವುದೂ ಅಪರೂಪವೇನಲ್ಲ. ಹೀಗೆ ಕಾಣೆಯಾದ ಫೋನನ್ನು ಹುಡುಕುವುದು ಹೇಗೆ?
ಇದಕ್ಕೆ ಹಲವು ಮಾರ್ಗಗಳಿವೆ.

ಗುರುವಾರ, ಏಪ್ರಿಲ್ 6, 2017
ಎಲ್ಲರ ಫೇವರಿಟ್ ಈ 'ಫೇವ್ಐಕನ್'!
ಟಿ. ಜಿ. ಶ್ರೀನಿಧಿ
ಅಂತರಜಾಲ ಸಂಪರ್ಕ ಬಳಸುವಾಗ ನಾವು ಒಂದಾದ ಮೇಲೆ ಒಂದರಂತೆ ಜಾಲತಾಣಗಳನ್ನು ತೆರೆಯುತ್ತಾ ಹೋಗುತ್ತೇವೆ. ಹಾಗೆ ತೆರೆದ ಜಾಲತಾಣಗಳು ಬೇರೆಬೇರೆ ಬ್ರೌಸರ್ ಕಿಟಕಿಗಳಲ್ಲೋ, ಒಂದೇ ಕಿಟಕಿಯ ವಿಭಿನ್ನ ಟ್ಯಾಬ್ಗಳಲ್ಲೋ ಕಾಣಿಸಿಕೊಳ್ಳುತ್ತವೆ ಎನ್ನುವುದೂ ನಮಗೆ ಗೊತ್ತು.
ಇಂತಹ ಪ್ರತಿಯೊಂದು ಕಿಟಕಿಯ ಮೇಲ್ಭಾಗದಲ್ಲೂ (ಬ್ರೌಸರಿನ ಟೈಟಲ್ ಬಾರ್ನಲ್ಲಿ) ನಾವು ತೆರೆದಿರುವ ತಾಣದ ಬಗ್ಗೆ ಕೆಲವು ಪದಗಳು ಮೂಡಿಬರುತ್ತವೆ. ಈ ಹೆಸರಿನ ಪಕ್ಕದಲ್ಲೇ ಪುಟ್ಟದೊಂದು ಚಿತ್ರವೂ ಇರುತ್ತದೆ.

ಸೋಮವಾರ, ಏಪ್ರಿಲ್ 3, 2017
ವೈ-ಫೈ ವಿಷಯ
ಟಿ. ಜಿ. ಶ್ರೀನಿಧಿ
ವೈರು - ಕೇಬಲ್ಲುಗಳನ್ನು ಜೋಡಿಸುವ ಗೊಡವೆಯಿಲ್ಲದೆ ಸರಾಗವಾಗಿ ಅಂತರಜಾಲ ಸಂಪರ್ಕ ನೀಡಿಬಿಡುವ ವೈ-ಫೈ ತಂತ್ರಜ್ಞಾನದ ಪರಿಚಯ ನಮಗೆ ಚೆನ್ನಾಗಿಯೇ ಇದೆ. ರೇಡಿಯೋ ಅಲೆಗಳ ಮೂಲಕ ತನ್ನ ಸಂಪರ್ಕದಲ್ಲಿರುವ ಸಾಧನಗಳಿಗೆ ಅಂತರಜಾಲ ಸಂಪರ್ಕ ಒದಗಿಸಿಕೊಡುವುದು ಈ ತಂತ್ರಜ್ಞಾನದ ಹೆಗ್ಗಳಿಕೆ.
ಅಂತರಜಾಲ ಸಂಪರ್ಕ ನಮ್ಮ ಮನೆಯವರೆಗೆ ಹಲವು ವಿಧಗಳಲ್ಲಿ ತಲುಪಬಹುದು. ಅದು ನಮ್ಮ ಸಾಧನಗಳಿಗೆ ಅರ್ಥವಾಗುವ ರೂಪಕ್ಕೆ ಬದಲಾಗುವುದು ಮೋಡೆಮ್ ಮೂಲಕ. ಈ ಸಂಕೇತಗಳನ್ನು ವೈ-ಫೈ ರೂಪಕ್ಕೆ ತರುವುದು ರೌಟರ್ ಎನ್ನುವ ಸಾಧನದ ಕೆಲಸ (ಬಹಳಷ್ಟು ಸನ್ನಿವೇಶಗಳಲ್ಲಿ ಮೋಡೆಮ್, ರೌಟರ್ ಎರಡೂ ಸಾಧನಗಳ ಕೆಲಸವನ್ನು ಒಂದೇ ಯಂತ್ರ ಮಾಡುತ್ತದೆ). ಈ ಸಾಧನದಿಂದ ಹೊರಹೊಮ್ಮುವ ಸಂಕೇತಗಳನ್ನು ಬಳಸಲು ಶಕ್ತವಾದ ಯಾವುದೇ ಸಾಧನ ಅಂತರಜಾಲ ಸಂಪರ್ಕವನ್ನು ಪಡೆದುಕೊಳ್ಳಬಹುದು. ಕಂಪ್ಯೂಟರ್ - ಟ್ಯಾಬ್ಲೆಟ್ - ಮೊಬೈಲ್ ಮಾತ್ರವೇ ಅಲ್ಲ, ಸ್ಮಾರ್ಟ್ ಟೀವಿ - ಸ್ಮಾರ್ಟ್ ವಾಚ್ - ಸ್ಟ್ರೀಮಿಂಗ್ ಡಿವೈಸ್ಗಳಂತಹ ಇನ್ನೂ ಅನೇಕ ಸಾಧನಗಳೂ ವೈ-ಫೈ ಬಳಸುತ್ತವೆ.

ಗುರುವಾರ, ಮಾರ್ಚ್ 30, 2017
ಇದೇನಿದು ಹೆಚ್ಟಿಟಿಪಿ?
ಟಿ. ಜಿ. ಶ್ರೀನಿಧಿ
ಬ್ರೌಸರ್ ತಂತ್ರಾಂಶ ಬಳಸಿ ಜಾಲತಾಣಗಳನ್ನು ವೀಕ್ಷಿಸುವುದು ನಮ್ಮೆಲ್ಲರಿಗೂ ಗೊತ್ತಿರುವ ವಿಷಯ. ಹಾಗೆ ಬ್ರೌಸರಿನಲ್ಲಿ ತೆರೆದುಕೊಳ್ಳುವ ಬಹುತೇಕ ಜಾಲತಾಣಗಳ ವಿಳಾಸ 'http://' ಎನ್ನುವ ಅಕ್ಷರಗಳಿಂದ ಪ್ರಾರಂಭವಾಗುತ್ತದೆ. ಇಲ್ಲಿ 'ಹೆಚ್ಟಿಟಿಪಿ' ಎನ್ನುವುದು 'ಹೈಪರ್ಟೆಕ್ಸ್ಟ್ ಟ್ರಾನ್ಸ್ಫರ್ ಪ್ರೋಟೋಕಾಲ್' ಎಂಬ ಹೆಸರಿನ ಹ್ರಸ್ವರೂಪ.

ಸೋಮವಾರ, ಮಾರ್ಚ್ 27, 2017
ಬ್ಲ್ಯಾಕ್ಲಿಸ್ಟ್ ಮತ್ತು ವೈಟ್ಲಿಸ್ಟ್
ಟಿ. ಜಿ. ಶ್ರೀನಿಧಿ
ಕಾಮಗಾರಿಯೊಂದರ ಗುಣಮಟ್ಟದ ಬಗ್ಗೆ ಗಲಾಟೆಯಾದಾಗ ಸಂಬಂಧಪಟ್ಟ ಗುತ್ತಿಗೆದಾರರನ್ನೋ ಕಚ್ಚಾಸಾಮಗ್ರಿ ಪೂರೈಸಿದವರನ್ನೋ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎನ್ನುವ ಹೇಳಿಕೆ ಸಾಮಾನ್ಯವಾಗಿ ಕೇಳಸಿಗುತ್ತದೆ.
ಕಪ್ಪುಪಟ್ಟಿ ಎಂಬ ಈ ಹೆಸರಿನ ಮೂಲ ಇಂಗ್ಲಿಷಿನ 'ಬ್ಲ್ಯಾಕ್ಲಿಸ್ಟ್'. ಯಾವುದೇ ಉದ್ದೇಶಕ್ಕೆ ಏನನ್ನು ಬಳಸಬಾರದು ಎಂದು ಸೂಚಿಸುವುದು ಈ ಪಟ್ಟಿಯ ಕೆಲಸ. ಗುತ್ತಿಗೆದಾರರ ಉದಾಹರಣೆಯನ್ನೇ ತೆಗೆದುಕೊಂಡರೆ ಮುಂದಿನ ಕಾಮಗಾರಿಯ ಗುತ್ತಿಗೆಯನ್ನು ಕಪ್ಪುಪಟ್ಟಿಯಲ್ಲಿಲ್ಲದವರಿಗೆ ಮಾತ್ರವೇ ಕೊಡುವುದು ಸಾಧ್ಯ.

ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)